ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರಿಗಹೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಸಂಬಂಧ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿ.ಟಿ ರವಿ, ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕರಾದ ಶ್ರೀ @HdRevanna ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
— C T Ravi ???????? ಸಿ ಟಿ ರವಿ (@CTRavi_BJP) August 28, 2020
Advertisement
ಸುಧಾಕರ್ ಟ್ವೀಟ್ ಮಾಡಿ, ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
Advertisement
ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕರಾದ ಶ್ರೀ ಎಚ್.ಡಿ.ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@HdRevanna pic.twitter.com/Lqys6IiPGW
— Dr Sudhakar K (@mla_sudhakar) August 28, 2020
Advertisement
ಸೋಂಕು ಬಂದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೇವಣ್ಣ ದಾಖಲಾಗಿದ್ದಾರೆ. ಎರಡು ತಿಂಗಳ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಸಂದರ್ಭದಲ್ಲಿ ಅವರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು.
ಆಗಸ್ಟ್ 25 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.