ಬೆಂಗಳೂರು: ಸಚಿವ ಸ್ಥಾನ ಸಿಗಲ್ಲ ಎಂದು ಖಚಿತವಾದ ಹಿನ್ನೆಲೆಯಲ್ಲಿ ಸರ್ಕಾರವನ್ನು ಟೀಕಿಸಲು ಎಲ್ಲೆಲ್ಲಿ ಅವಕಾಶ ಸಿಗುತ್ತೋ, ಎಲ್ಲವನ್ನು ಎಂಎಲ್ಸಿ ಹೆಚ್. ವಿಶ್ವನಾಥ್ ಬಳಸಿಕೊಳ್ತಿದ್ದಾರೆ. ಪರಿಷತ್ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ವಿಶ್ವನಾಥ್, ಆಡಳಿತ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಕೆಲಸ ಮಾಡಿದ್ದಾರೆ.
Advertisement
ನೂತನ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಸ್ವಿ ರಂಗನಾಥ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಿದ್ದಕ್ಕೆ ವಿಶ್ವನಾಥ್ ಆಕ್ರೋಶ ಹೊರಹಾಕಿದ್ದಾರೆ. ಅಪರಾಧ ಆರೋಪ ಹೊತ್ತ ಸಂಸ್ಥೆಯ ಅಧ್ಯಕ್ಷರಾದವರನ್ನ ಕಾರ್ಯಪಡೆ ಅಧ್ಯಕ್ಷರಾಗಿ ಮಾಡಬೇಡಿ ಎಂದಿದ್ದಾರೆ. ರಂಗನಾಥ್ ಬದಲಾವಣೆ ಮಾಡಲ್ಲ ಅಂತಾ ಡಿಸಿಎಂ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಮ್ಮಿಂದಲೇ ಸರ್ಕಾರ ಬಂದ್ರೂ ನಮ್ಮ ಜೊತೆ ನಿಲ್ಲಲಿಲ್ಲ- ಬಿಜೆಪಿ ನಾಯಕರ ವಿರುದ್ಧ ವಿಶ್ವನಾಥ್ ಅಸಮಾಧಾನ
Advertisement
Advertisement
ಹೊಸ ಶಿಕ್ಷಣ ನೀತಿಯನ್ನು ಸಚಿವರೇ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ವಿಶ್ವನಾಥ್ ಮತ್ತೆ ಚಾಟಿ ಬೀಸಿದ್ದಾರೆ. ಇದಕ್ಕೆ ವಿಪಕ್ಷಗಳು ಬೆಂಬಲ ಕೊಟ್ವು. ಈ ಮಧ್ಯೆ, ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ವಿಧೇಯಕವನ್ನು ಸಚಿವ ಅಶೋಕ್ ಮಂಡಿಸಿದ್ದು, ಅದರ ಮೇಲೆ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ವಿಶ್ವನಾಥ್ ಹೇಳಿಕೆಗೆ ಬಿ.ವೈ ವಿಜಯೇಂದ್ರ ಪರೋಕ್ಷ ಟಾಂಗ್