ಬೆಂಗಳೂರು: ಅಕ್ರಮವಾಗಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಮುಖೇಶ್ ಮತ್ತು ರೋಹಿ ಬಂಧಿತ ದಂಪತಿ. ಮೂಲತಃ ಪಂಜಾಬ್ ರಾಜ್ಯದವರಾದ ಆರೋಪಿಗಳು ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಆರೋಪಿಗಳು ಕಳೆದ ಮೂವತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಪೀಣ್ಯಾ ಬಳಿ ಜಗಜ್ಯೋತಿ ಎಜುಕೇಶನ್ ಇನ್ಟ್ಸಿಟ್ಯೂಟ್ ನಡೆಸುತ್ತಿದ್ದರು. ಈ ಸಂಸ್ಥೆ ಹೆಸರಲ್ಲಿ ಎಂಎ, ಎಂಬಿಎ, ಬಿಸಿಎ, ಬಿಟೆಕ್, ಬಿಬಿಎ, ಬಿಕಾಂ, ಬಿಎಸ್ಸಿ, ಸೇರಿ ಹಲವು ಡಿಗ್ರಿ ಮಾರ್ಕ್ಸ್ ಕಾರ್ಡ್ ನೀಡುತಿದ್ದರು. ಒಂದು ಡಿಗ್ರಿಗೆ 60 ಸಾವಿರದಿಂದ 70 ಸಾವಿರ ರೂಪಾಯಿ ವರೆಗೆ ಹಣ ಪಡೆದು ಪದವಿ ಅಂಕಪಟ್ಟಿಗಳನ್ನು ನೀಡುತ್ತಿದ್ದರು. ಇದನ್ನೂ ಓದಿ: ವಾಹನ ಗುಜುರಿ ನೀತಿ ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಮೋದಿ
Advertisement
Advertisement
ಸಿಸಿಬಿ ಪೊಲೀಸರ ದಾಳಿಯ ವೇಳೆ ಸಿ.ವಿ ರಾಮನ್ ಯುನಿವರ್ಸಿಟಿ, ರವೀಂದ್ರನಾಥ್ ಟ್ಯಾಗೋರ್ ಯುನಿವರ್ಸಿಟಿ. ಅಸೆಟ್ ಯುನಿವರ್ಸಿಟಿಗೆ ಸೇರಿದ ಮಾರ್ಕ್ಸ್ ಕಾರ್ಡ್ಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಇಲ್ಲಿಯವರೆಗೂ 500ಕ್ಕೂ ಹೆಚ್ಚು ಫಲನುಭವಿಗಳಿಗೆ ಮಾರ್ಕ್ಸ್ ಕಾರ್ಡ್ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳ ಹೆಚ್ಚಿನ ತನಿಖೆಯಿಂದ ಮತ್ತಷ್ಟು ನಕಲಿ ಅಂಕಪಟ್ಟಿ ಹಿಂದಿನ ಮುಖವಾಡ ಬಯಲಾಗುವ ಸಾದ್ಯತೆ ಇದೇ ಎನ್ನುತ್ತಿದೆ ಸಿಸಿಬಿ ಮೂಲಗಳು.
Advertisement