ಮಂಗಳೂರು: ಕೊರೊನಾ ಹರಡುವಿಕೆ ತಡೆಯಲು ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರಿಗೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ 200 ರೂಪಾಯಿ ದಂಡ ವಿಧಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ.
ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಈ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಾಸ್ಕ್ ಹಾಕಿಕೊಳ್ಳದೆ ಬೈಕ್, ಕಾರುಗಳಲ್ಲಿ ಸಂಚರಿಸುವವರು ಹಾಗೂ ಸಾರ್ವಜನಿಕ ರಸ್ತೆಗಳಲ್ಲಿ ಓಡಾಡುವವರ ಮೇಲೆ ಪಾಲಿಕೆಯ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದೆ.
Advertisement
Advertisement
ನಗರದಲ್ಲಿ ಅಲ್ಲಲ್ಲಿ ಜನರು ಮುಖಕ್ಕೆ ಮಾಸ್ಕ್ ಧರಿಸದೇ ಓಡಾಡುತ್ತಿರುವುದು ಕಂಡು ಬರುತ್ತಿದೆ. ಹೀಗಾಗಿ ಪಾಲಿಕೆ ಆಯುಕ್ತರು ಹಾಗೂ ಆರೋಗ್ಯಾಧಿಕಾರಿ ಡಾ.ಮಂಜಯ್ಯ ಶೆಟ್ಟಿ ನೇತೃತ್ವದ ಆರೋಗ್ಯ ಅಧಿಕಾರಿಗಳ ತಂಡ ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಲಾಗುತ್ತಿದೆ.
Advertisement
Advertisement
ಜನರಿಗೆ ದಂಡ ವಿಧಿಸುವುದು ನಮ್ಮ ಉದ್ದೇಶವಲ್ಲ. ಆದರೆ ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಜನರು ಜಾಗೃತರಾಗಬೇಕು. ಮಾಸ್ಕ್ ಇಲ್ಲದೇ ಹೊರಗೆ ಬರಬಾರದು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಪಾಲಿಕೆ ಆಯುಕ್ತರು ಅಭಿಪ್ರಾಯಪಟ್ಟಿದ್ದಾರೆ.