ದಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಅಂದರೆ ಅದೇನೋ ಪ್ರೀತಿ. ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಅನೇಕ ಬಾರಿ ಹೇಳಿದ್ದರು. ಇದನ್ನೂ ಓದಿ: ಬಾಲ್ಯದಲ್ಲಿ ಸಂಗೀತ ಕಲಿಯದಿದ್ರೂ ಗೆದ್ದ ಎಸ್ಪಿಬಿ – ತಂದೆಯೇ ಪ್ರೇರಣೆ
Advertisement
ಒಂದು ದಶಕಗಳ ಕಾಲ ಎದೆತುಂಬಿ ಹಾಡುವೆನು ಕಾರ್ಯಕ್ರಮವನ್ನು ನಡೆಸಿಕೊಂಡವುದರ ಜೊತೆಗೆ ಬೇರೆ ಭಾಷೆಗಳಲ್ಲಿ ಕೂಡ ಸಂಗೀತದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಜೊತೆಗೆ ತಾವೇ ತೀರ್ಪುಗಾರರಾಗಿ ಹತ್ತು ಹಲವು ಸಂಗೀತದ ಶೋಗಳಲ್ಲಿ ಕುಳಿತಿದ್ದರು. ಈ ವೇಳೆ ಪುಟಾಣಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಂಗೀತದ ಸರಿ-ತಪ್ಪುಗಳನ್ನು ತಿದ್ದಿದ್ದಾರೆ. ಈ ಮೂಲಕ ಸಂಗೀತದ ಎಸ್.ಪಿ.ಬಾಲಸುಬ್ರಹ್ಮಣ್ಯಂ ರಾಯಭಾರಿಯಾಗಿ ಮೆರೆದಿದ್ದಾರೆ.ಇದನ್ನೂ ಓದಿ: ನನ್ನ ಅಪ್ಪನನ್ನು ಬಿಟ್ಟು ಬಿಡಿ – ಐದರ ಬಾಲಕನ ಕಣ್ಣೀರ ಅಭಿನಯಕ್ಕೆ ಚಪ್ಪಾಳೆ ಮೇಲೆ ಚಪ್ಪಾಳೆ
Advertisement
Advertisement
ಆಂಧ್ರದಲ್ಲಿ ಹುಟ್ಟಿ ಬೆಳೆದರೂ, ನಾನು ಹಿನ್ನೆಲೆ ಗಾಯಕನಾಗಿ ಹಾಡಿನ ಎರಡನೇ ಹಾಡೇ ಕನ್ನಡದಲ್ಲಿ. ಅಲ್ಲಿಂದ ಪ್ರಾರಂಭವಾದ ಈ ಪಯಣ ಇಲ್ಲಿಯವರೆಗೂ ಬಂದಿದೆ. ಕನ್ನಡಿಗರು ನೀಡಿದ ಪ್ರೀತಿ, ವಾತ್ಸಲ್ಯ ನನಗೆ ಬೇರೆ ಯಾರಿಂದಲೂ ಸಿಕ್ಕಿಲ್ಲ. ಮುಂದಿನ ಜನ್ಮದಲ್ಲಿ ನಾನು ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಎಸ್.ಪಿ.ಬಿ ಸಾಕಷ್ಟು ಬಾರಿ ಹೇಳಿದ್ದರು.
Advertisement
ಬಾಲಸುಬ್ರಹ್ಮಣ್ಯಂ ಅವರು 2018ರಲ್ಲಿ ತೆರೆಕಂಡ ‘ದೇವದಾಸ್’ಚಿತ್ರದಲ್ಲಿ ನಟಿಸಿದ್ದರು. 1969ರಿಂದ ಇಲ್ಲಿಯವರೆಗೆ ಹಲವು ಭಕ್ತಿ ಪ್ರಧಾನ ಸಾಮಾಜಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ನೀಡಿದ್ದರು. ಕನ್ನಡ ಮಾತ್ರವಲ್ಲದೇ ಒಂದೇ ದಿನದಲ್ಲಿ ತಮಿಳು ಹಾಗೂ ತೆಲುಗಿನ 19 ಗೀತೆಗಳನ್ನು ರೆಕಾರ್ಡ್ ಮಾಡಿದ್ದರು. ಎಸ್.ಪಿ.ಬಿ ನಿರ್ವಹಣೆಯಲ್ಲಿ ಮೂಡಿಬರುತ್ತಿದ್ದ ಎದೆ ತುಂಬಿ ಹಾಡುವೆನು ಕಾರ್ಯಕ್ರಮವನ್ನು ಇಂದಿಗೂ ಜನ ಮರೆತಿಲ್ಲ.
ಗಾಯನ ಮಾತ್ರವಲ್ಲದೇ ಅನೇಕ ನಟರಿಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಧ್ವನಿ ನೀಡಿದ್ದಾರೆ. ಎಲ್ಲಾ ಭಾಷೆಯಲ್ಲೂ ದೊಡ್ಡ ದೊಡ್ಡ ನಟರಿಗೆ ವಾಸ್ ಕೊಟ್ಟಿದ್ದಾರೆ. ಕಮಲ್ ಹಾಸನ್, ರಜಿನಿಕಾಂತ್, ವಿಷ್ಣುವರ್ಧನ್, ಸಲ್ಮಾನ್ ಖಾನ್, ಕೆ.ಭಾರ್ಗವ್ ರಾಜ್, ಮೊಹನ್, ಅನಿಲ್ ಕಪೂರ್, ಗಿರೀಶ್ ಕಾರ್ನಡ್, ಜಮಿನಿ ಗಣೇಶನ್, ಅರ್ಜುನ್ ಸರ್ಜಾ, ನಾಗೇಶ್, ಕಾರ್ತಿಕ್, ರಾಘುವೀರನ್ಗೆ ಬೇರೆ ಬೇರೆ ಭಾಷೆಗಳಿಗೆ ವಾಯ್ಸ್ ಕೊಟ್ಟಿದ್ದಾರೆ.