ಮುಂಬೈ: ಮುಂಬೈನಲ್ಲಿ ಕಳೆದ ರಾತ್ರಿಯಿಂದ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆ ಹಲವು ಪ್ರದೇಶಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
Advertisement
ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯಗಢ್ದಲ್ಲಿ ಬಿಡುವಿಲ್ಲದೇ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಐಎಂಡಿಯ ಪ್ರಾದೇಶಿಕ ಹವಮಾನ ಕೇಂದ್ರವು ಮುಂಬೈನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.
Advertisement
Advertisement
ಬುಧವಾರ ಅತೀ ಹೆಚ್ಚು ಮಳೆಯಾಗಿದ್ದರು ರಸ್ತೆ ಮತ್ತು ರೈಲು ಸಂಚಾರಕ್ಕೆ ಮಳೆಯಿಂದಾಗಿ ಯಾವುದೇ ತೊಂದರೆಯುಂಟಾಗಿಲ್ಲ. ಭಾನುವಾರ ಮತ್ತು ಸೋಮವಾರ ಹೆಚ್ಚಾಗಿ ಸುರಿದ ಮಳೆ, ಬುಧವಾರ ಮಧ್ಯಾಹ್ನ ಕೊಂಚ ಕಡಿಮೆಯಾಗಿತ್ತು. ಆದರೆ ಮತ್ತೆ ರಾತ್ರಿ ಇಡೀ ಮಳೆ ಧಾರಕಾರವಾಗಿ ಸುರಿದಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
Advertisement
ಗುಜರಾತ್ನ ಕರಾವಳಿಯಿಂದ ಕರ್ನಾಟಕದ ತೀರದವರೆಗೂ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿಯೂ ಮುಂಬೈನಲ್ಲಿ ಕೆಲವು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ, ಬೆಟ್ಟಗಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿಂದು ರೈತರ ಪ್ರತಿಭಟನೆ – ಗಡಿಯಲ್ಲಿ ಬಿಗಿ ಭದ್ರತೆ