ಚೆನ್ನೈ: ಕೆಲ ದಿನಗಳ ಹಿಂದೆಯಷ್ಟೇ ನಟ ವಿಜಯ್ ಸೇತುಪತಿ, ಸ್ಪಿನ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ನಲ್ಲಿ ನಟಿಸುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ಚಿತ್ರತಂಡ ಕೂಡ ಸಿನಿಮಾ ಮೋಷನ್ ಪೋಸ್ಟರ್ ಕೂಡ ಬಿಡುಗಡೆ ಮಾಡಿತ್ತು. ಆದರೆ ಇದೀಗ ಸಿನಿಮಾದಿಂದ ನಟ ವಿಜಯ್ ಸೇತುಪತಿ ಹೊರ ನಡೆದಿದ್ದು, ಮುರಳೀಧರನ್ ಅವರ ಮನವಿಯ ಮೇರೆಗೆ ಈ ನಿರ್ಧಾರ ಮಾಡಿದ್ದಾರೆ.
#Muralidaran requests #VijaySethupathi to leave from the project #800 pic.twitter.com/BkZyONuusf
— Thusi (@thusi_c) October 19, 2020
Advertisement
ಮುರಳೀಧರನ್ ಬಯೋಪಿಕ್ನಲ್ಲಿ ವಿಜಯ್ ಸೇತುಪತಿ ನಟಿಸುತ್ತಿರುವುದು ಖಚಿತವಾಗುತ್ತಿದಂತೆ ತಮಿಳುನಾಡಿನಲ್ಲಿ ಹೊಸ ವಿವಾದ ಸೃಷ್ಟಿಯಾಗಿತ್ತು. 2009ರಲ್ಲಿ ಮುರಳೀಧರನ್ ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖರ್ ವೈರಲ್ ಆಗಿತ್ತು. ಅಲ್ಲದೇ ಸಿನಿಮಾ ವಿರುದ್ಧ ಟ್ವಿಟ್ಟರಿನಲ್ಲಿ ಟ್ರೆಂಟ್ ಕೂಡ ಮಾಡಲಾಗಿತ್ತು.
Advertisement
Advertisement
ವಿವಾದ ಬೆನ್ನಲ್ಲೇ ಮುತ್ತಯ್ಯ ಮುರಳೀಧರನ್ ಅವರ ಮನವಿಯ ಮೇರೆಗೆ ವಿಜಯ್ ಸೇತುಪತಿ ಸಿನಿಮಾದಿಂದ ಹೊರನಡೆದಿದ್ದಾರೆ. ತನ್ನ ಕಾರಣದಿಂದ ನಟ ವಿಜಯ್ ಸೇತುಪತಿ ಭವಿಷ್ಯದಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸಬಾರದು ಎಂದು ಮುರಳೀಧರನ್ ಹೇಳಿದ್ದಾರೆ.
Advertisement
ಈ ಕುರಿತಂತೆ ಮುರಳೀಧರನ್ ತಮಿಳು ಭಾಷೆಯಲ್ಲೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಬಯೋಪಿಕ್ ‘800’ ಕುರಿತಂತೆ ವಿವಾದಗಳು ಬಂದಿರುವುದರಿಂದ ನಾನು ಈ ಹೇಳಿಕೆ ನೀಡುತ್ತಿದ್ದೇನೆ. ತಪ್ಪು ಕಲ್ಪನೆಯಿಂದ ಹಲವರು ನಟ ವಿಜಯ್ ಸೇತುಪತಿ ಅವರನ್ನು ಚಿತ್ರದಿಂದ ದೂರ ಉಳಿಯುವಂತೆ ಒತ್ತಾಯಿಸಿದ್ದರು. ಅವರಿಗೆ ತೊಂದರೆಯಾಗಲು ನಾನು ಬಯಸುವುದಿಲ್ಲ. ಆದ್ದರಿಂದ ನಾನೇ ಅವರನ್ನು ಯೋಜನೆಯಿಂದ ಹೊರಗುಳಿಯುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದರು.
ನಾನು ಈ ಸಿನಿಮಾವನ್ನು ಉತ್ತಮ ಮಹತ್ವಾಕಾಂಕ್ಷಿ ಉದ್ದೇಶದಿಂದ ಒಪ್ಪಿಕೊಂಡಿದ್ದು, ಸಿನಮಾ ಹಲವು ಯುವ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ. ಸದ್ಯ ಎದುರಾಗಿರುವ ಅಡೆತಡೆಗಳನ್ನು ಚಿತ್ರದ ತಯಾರಕರು ನಿವಾರಿಸುತ್ತಾರೆ ಎಂಬ ವಿಶ್ವಾಸವಿದೆ. ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ನನ್ನನ್ನು ಬೆಂಬಲಿಸಿದ ಅಭಿಮಾನಿಗಳು, ಮಾಧ್ಯಮಗಳಿಗೆ ನನ್ನ ಧನ್ಯವಾದ ಎಂದು ಮುರಳೀಧರನ್ ತಿಳಿಸಿದ್ದಾರೆ.
2009ರ ಮೇನಲ್ಲಿ ಶ್ರೀಲಂಕಾದ ಸೇನೆ ಈಶಾನ್ಯ ಶ್ರೀಲಂಕಾದಲ್ಲಿ ವಾಸವಿದ್ದ ಅನೇಕ ಮಂದಿ ತಮಿಳಿಗರನ್ನು ಹೊಡೆದು ಹಾಕಿತ್ತು. ಅಂದು ಮುತ್ತಯ್ಯ ಮುರಳೀಧರನ್, ಇಂದು ನನಗೆ ಅತ್ಯಂತ ಸಂತೋಷದ ದಿನ ಎಂದು ಹೇಳಿದ್ದರು. ಈಗ ಈ ಕಾರಣಕ್ಕೆ ತಮಿಳುನಾಡಿನ ಕೆಲ ಚಿತ್ರ ಪ್ರೇಮಿಗಳು ಮತ್ತು ರಾಜಕಾರಣಿಗಳು ಸಾವಿರಾರು ತಮಿಳಿಗರು ಸತ್ತ ದಿನವನ್ನು ಸಂತೋಷದ ದಿನ ಎಂದಿದ್ದ ಮುತ್ತಯ್ಯ ಮುರಳೀಧರನ್ ಬಯೋಪಿಕ್ನಲ್ಲಿ ತಮಿಳಿನ ನಟ ಅಭಿನಯಿಸುವುದು ಬೇಡ ಎಂದು ಆಗ್ರಹಿಸಿದ್ದರು. ಇದರ ಬೆನಲ್ಲೇ ಸ್ಪಷ್ಟ ನೀಡಿದ್ದ ಮುರಳೀಧರನ್, ಅಂದು ನಾನು ಹೇಳಿದ ಹೇಳಿಕೆಯನ್ನು ತಿರುಚಲಾಗಿದೆ. ಅಂದು ನಾನು ಅಮಾಯಕರು ಸತ್ತಿದ್ದಕ್ಕೆ ಸಂತೋಷವಾಗಿದೆ ಎಂದು ಹೇಳಿರಲಿಲ್ಲ. ಸುಮಾರು ವರ್ಷದಿಂದ ನಡೆದುಕೊಂಡು ಬರುತ್ತಿದ್ದ ಯುದ್ಧ, ಘರ್ಷಣೆ ಇಲ್ಲಿಗೆ ಕೊನೆಯಾಗಿದೆ. ಅದಕ್ಕೆ ಸಂತೋಷವಾಗುತ್ತಿದೆ ಎಂದು ಹೇಳಿದ್ದೆ. ನಾನು ಎಂದು ಅಮಾಯಕರ ಕೊಲ್ಲುವುದನ್ನು ಬೆಂಬಲಿಸಿಲ್ಲ ಎಂದು ಮುತ್ತಯ್ಯ ಮುರಳೀಧರನ್ ಸ್ಪಷ್ಟಪಡಿಸಿದ್ದರು.