ಬೆಂಗಳೂರು: ಮೂರನೇ ಅಲೆಯ ಭೀತಿ ಹೆಚ್ಚುತ್ತಿದ್ದಂತೆ, ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಅಂತರ್ ಜಿಲ್ಲೆ, ಅಂತರ್ ರಾಜ್ಯಗಳಿಂದ ಬರುವ ಪ್ರತಿ ಪ್ರಯಾಣಿಕರ ಮೇಲೂ ನಿಗಾ ವಹಿಸಲಾಗಿದ್ದು, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.
Advertisement
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಬೆಳಗಿನ ಜಾವ 4 ಗಂಟೆಯಿಂದ 15ಕ್ಕೂ ಹೆಚ್ಚು ತಂಡಗಳಿಂದ ಕೋವಿಡ್ ಪರೀಕ್ಷೆ ನಡೆಯುತ್ತಿದ್ದು, ಎಂಟ್ರಿ, ಎಕ್ಸಿಟ್ ಭಾಗಗಳಲ್ಲಿ ಪ್ರತಿ ಪ್ರಯಾಣಿಕರ ಮೇಲೂ ಆರೋಗ್ಯ ಸಿಬ್ಬಂದಿ ನಿಗಾ ವಹಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಟ್ಟು 30 ತಂಡಗಳಿಂದ ತಲಾ 300 ಜನರಿಗೆ ನಿತ್ಯ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ರೈಲ್ವೆ ನಿಲ್ದಾಣದಲ್ಲಿ ಮಾರ್ಷಲ್ಸ್ ಗಳು ಕೂಡ ಪ್ರಯಾಣಿಕರ ಮೇಲೆ ನಿಗಾ ವಹಿಸಿತ್ತಿದ್ದೂ ಮಾಸ್ಕ್ ಹಾಕದವರಿಗೆ ದಂಡವನ್ನು ವಿಧಿಸಲಾಗುತ್ತಿದೆ.
Advertisement
Advertisement
ಆಟೋ ಚಾಲಕರ ಹಾವಳಿ:
ಅಂತರ್ ರಾಜ್ಯ, ಅಂತರ್ ಜಿಲ್ಲೆಯ ಪ್ರಯಾಣಿಕರಿಗೆ ಆರೋಗ್ಯ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡುತ್ತಿದ್ದಾರೆ. ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಆತುರದಲ್ಲಿ ಆರೋಗ್ಯ ಸಿಬ್ಬಂದಿಗೆ ಆಟೋ ಚಾಲಕರು ಕಿರಿಕಿರಿ ಮಾಡುತ್ತಿದ್ದಾರೆ. ಸರಿಯಾಗಿ ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಓಡಾಡುತ್ತಿದ್ದಾರೆ. ಮಾಸ್ಕ್ ಹಾಕಿ ಎಂದು ಮಾರ್ಷಲ್ಸ್ ಗಳು ಪ್ರಶ್ನೆ ಮಾಡಿದರೆ, ಮಾರ್ಷಲ್ಸ್ ಗಳ ಮೇಲೆಯೇ ಆಟೋ ಚಾಲಕರು ಗಲಾಟೆ ಮಾಡುತ್ತಿದ್ದಾರೆ ಎಂದು ಮಾರ್ಷಲ್ಸ್ ಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ:ಮುಂದಿನ ಚುನಾವಣೆ ಜವಾಬ್ದಾರಿ ನನ್ನ ಮೇಲಿದೆ: ಸಿಎಂ ಬಿಎಸ್ವೈ
Advertisement