ನೆಲಮಂಗಲ: ದೇಶಾದ್ಯಂತ ಕೋವಿಡ್ ಮೂರನೇ ಅಲೆಯ ಆತಂಕ ಎದುರಾಗಿದ್ದು ವ್ಯಾಕ್ಸಿನ್ ಸಮಸ್ಯೆ ಎದುರಾಗಿದೆ.
Advertisement
ಬೆಂಗಳೂರು ಹೊರವಲಯ ನೆಲಮಂಗಲ ನಗರದ ವ್ಯಾಕ್ಸಿನ್ ಕೇಂದ್ರದಲ್ಲಿ ವ್ಯಾಕ್ಸಿನ್ ಕೊರತೆ ಉಂಟಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕವಾಗಿ ವ್ಯಾಕ್ಸಿನ್ ಪೂರೈಕೆಯಾಗದ ಹಿನ್ನೆಲೆ ಸಾರ್ವಜನಿಕರು ವ್ಯಾಕ್ಸಿನ್ ಗಾಗಿ ಮುಗಿಬಿದ್ದಿರುವ ದೃಶ್ಯ ಕಂಡುಬಂದಿದ್ದು, ಬೆಳಗ್ಗೆ 5-6 ಗಂಟೆಗೆ ಬಂದರೂ ವ್ಯಾಕ್ಸಿನ್ ಸಿಗುತ್ತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ನೆಲಮಂಗಲ ತಾಲೂಕು ಆಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ನಾಲ್ಕೈದು ದಿನದಿಂದ ವ್ಯಾಕ್ಸಿನ್ ಕೇಂದ್ರಕ್ಕೆ ಬಂದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಕೇವಲ 400 ಡೋಸ್ ವ್ಯಾಕ್ಸಿನ್ ಗೆ 600 – 700 ಜನರು ಬಂದಿದ್ದು, ವ್ಯಾಕ್ಸಿನ್ ಪಡೆಯಲು ಜನರ ನೂಕು, ನುಗ್ಗಲು ಮುಂದುವರೆದಿದೆ.
Advertisement
ಸಮರ್ಪಕವಾಗಿ ವ್ಯಾಕ್ಸಿನ್ ಪೂರೈಕೆ ಆಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ವ್ಯಾಕ್ಸಿನ್ ಪೂರೈಕೆ ಮಾಡಿ ಜನರಿಗೆ ಒದಗಿಸುವ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಕುರಿ ವ್ಯಾಪಾರಕ್ಕೆ ತೆರಳುತ್ತಿದ್ದ ತಂದೆ, ಮಗ ಸಾವು