ನವದೆಹಲಿ: ಕೋವಿಶೀಲ್ಡ್, ಕೋವಾಕ್ಸಿನ್ ಬಳಿಕ ದೇಶದಲ್ಲಿ ರಷ್ಯಾದ ಸ್ಪುಟ್ನಿಕ್ V ಲಸಿಕೆ ತುರ್ತು ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.
ಇಂದು 1.60 ಲಕ್ಷ ಕೊರೊನಾ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಡಿಸಿಜಿಐ ಅನುಮತಿ ನೀಡಿದೆ. 2020ರ ಆಗಸ್ಟ್ನಲ್ಲಿ ರಷ್ಯಾ ಈ ಲಸಿಕೆಯನ್ನು ಬಿಡುಗಡೆ ಮಾಡಿತ್ತು. ಕೊರೊನಾ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ವಿತರಣೆ ಹೆಚ್ಚಿಸಲು ತಜ್ಞರ ಸಮಿತಿ ಸ್ಪುಟ್ನಿಕ್ ಲಸಿಕೆ ಬಳಕೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸಿನ ಹಿನ್ನೆಲೆಯಲ್ಲಿ ಡಿಸಿಜಿಐ ಅನುಮತಿ ನೀಡಿದೆ.
Advertisement
Advertisement
ಸ್ಪುಟ್ನಿಕ್ V ಲಸಿಕೆಯನ್ನು ಭಾರತದಲ್ಲಿ ಡಾ| ರೆಡ್ಡೀಸ್ ಕಂಪನಿ ಜನರ ಮೇಲೆ ಪ್ರಯೋಗ ನಡೆಸುತ್ತಿದ್ದು, ಅನುಮತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿತ್ತು. ಸ್ಪುಟ್ನಿಕ್ ಲಸಿಕೆಯನ್ನು ಭಾರತದಲ್ಲಿ ಹೈದರಾಬಾದ್ನ ಡಾ| ರೆಡ್ಡೀಸ್ ಲ್ಯಾಬೋರೇಟರಿ, ಹೆಟೆರೊ ಬಯೋಫಾರ್ಮಾ, ಗ್ಲಾಂಡ್ ಫಾರ್ಮಾ, ಸ್ಟೆಲಿಸ್ ಬಯೋಫಾರ್ಮಾ ಹಾಗೂ ವಿಕ್ರೋ ಬಯೋಟೆಕ್ ಕಂಪನಿಗಳಲ್ಲಿ ಈಗಾಗಲೇ ತಯಾರಿಸಲಾಗುತ್ತಿದೆ.
Advertisement
ಭಾರತದಲ್ಲಿ ಸದ್ಯ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳಿಗಷ್ಟೇ ಅನುಮತಿಯಿದ್ದು, ಅವುಗಳನ್ನೇ ಜನರಿಗೆ ನೀಡಲಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಕೊರೋನಾ ಲಸಿಕೆಯ ಕೊರತೆ ಕಾಣಿಸಿಕೊಳ್ಳುತ್ತಿದೆ. ಈಗ ಈ ಲಸಿಕೆಗೆ ಒಪ್ಪಿಗೆ ಸಿಕ್ಕಿದರಿಂದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಕ್ಕಿದಂತಾಗಿದೆ. ವರ್ಷಕ್ಕೆ 85 ಕೋಟಿ ಸ್ಪುಟ್ನಿಕ್ ಲಸಿಕೆಯನ್ನು ತಯಾರಿಸುವ ಸಾಮರ್ಥ್ಯ ಭಾರತದ ವಿವಿಧ ಘಟಕಗಳಿಗಿರುವುದು ವಿಶೇಷ.
Advertisement
ಮುಂದಿನ ದಿನಗಳಲ್ಲಿ ಜಾನ್ಸನ್ ಅಂಡ್ ಜಾನ್ಸನ್, ನೋವಾವಾಕ್ಸ್, ಜೈಡಸ್ ಕ್ಯಾಡಿಲಾ ಹಾಗೂ ಇಂಟ್ರಾನೇಸಲ್ (ಮೂಗಿನ ಮೂಲಕ ತೆಗೆದುಕೊಳ್ಳುವ) ಲಸಿಕೆಗೂ ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ. ಸುಮಾರು 20 ಬೇರೆ ಬೇರೆ ಕೊರೋನಾ ಲಸಿಕೆಗಳು ದೇಶದಲ್ಲಿ ಪ್ರಯೋಗದ ವಿವಿಧ ಹಂತದಲ್ಲಿವೆ.
ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ಅಭಿವೃದ್ಧಿ ಪಡಿಸಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 2020ರ ಆಗಸ್ಟ್ 11 ರಂದು ಘೋಷಿಸಿದ್ದರು. ಪುಟಿನ್ ಪುತ್ರಿ ಮರಿಯಾ ಪುಟಿನ್ಗೆ ಮೊದಲ ಸ್ಪುಟ್ನಿಕ್ ಲಸಿಕೆ ನೀಡಲಾಗಿತ್ತು. ಉತ್ತಮ ಪರಿಣಾಮ ಬೀರಿದ್ದು, ಸಮೃದ್ಧವಾಗಿ ಆಂಟಿಬಾಡಿಗಳು(ಪ್ರತಿಕಾಯಗಳು) ಉತ್ಪತ್ತಿಯಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಸೋಂಕನ್ನು ನಿಯಂತ್ರಣಕ್ಕೆ ಈ ಲಸಿಕೆ ತರುತ್ತದೆ ಎಂದು ವರದಿಯಾಗಿದೆ.
ಮಾಸ್ಕೋದಲ್ಲಿರುವ ಸೆಚನೋವ್ ವಿವಿಯ ಗಮಾಲಿಯಾ ಸಂಶೋಧನಾ ಕೇಂದ್ರ ಮತ್ತು ರಷ್ಯಾ ರಕ್ಷಣಾ ಸಚಿವಾಲಯ ಈ ಲಸಿಕೆಯನ್ನು ಅಭಿವೃದ್ಧಿ ಪಡಿಸಿದೆ.