ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕೊರೊನಾ ಸ್ಫೋಟವಾಗಿದ್ದು, 12 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
ಮೂರು ದಿನಗಳ ಕಾಲ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ. ಅಂದರೆ ಮಂಗಳವಾರದವರೆಗೂ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ. ಇದುವರೆಗೂ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಪೊಲೀಸ್ ಸೋಂಕಿತರ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.
Advertisement
Advertisement
ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಿಸಿಆರ್ ಬಿ ವಿಭಾಗದಲ್ಲಿ 8 ಮತ್ತು ಅಡ್ಮಿನ್ ವಿಭಾಗದಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಒಂದು ವಾರದಿಂದ ರ್ಯಾಂಡಮ್ ಟೆಸ್ಟ್ ಮಾಡಲಾಗಿತ್ತು. ರ್ಯಾಂಡಮ್ ಟೆಸ್ಟ್ ನಲ್ಲಿ ಕೊರೊನಾ ಪತ್ತೆಯಾಗಿದೆ. ಹೀಗಾಗಿ ಮೂರು ದಿನಗಳ ಕಚೇರಿಯನ್ನು ಲಾಕ್ಡೌನ್ ಮಾಡಲಾಗಿದೆ.
Advertisement
ಈಗಾಗಲೇ ವಿಧಾನಸೌಧ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ. ಠಾಣೆಯ ಒಬ್ಬ ಸಿಬ್ಬಂದಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ಒಂದು ದಿನಗಳ ಕಾಲ ವಿಧಾನಸೌಧ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ. ಗುರುವಾರ ವಿಧಾನಸೌಧ ಠಾಣೆಯ ಕಾನ್ಸ್ಟೇಬಲ್ಗೆ ಸೋಂಕು ಇರುವುದು ದೃಢವಾಗಿತ್ತು.