– ಕಾದು ನೋಡೋಣ ಅಂದಿದ್ಯಾಕೆ ಬಿಎಸ್ವೈ?
ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಹೈಕಮಾಂಡ್ಗೆ ಶಾಕ್ ನೀಡಿದ್ರಾ ಅನ್ನೋ ಪ್ರಶ್ನೆ ಮುನ್ನಲೆಗೆ ಬಂದಿದೆ. ಇಂದು ಮೂರು ಬಾರಿ ಒಂದೇ ಹೇಳಿಕೆ ನೀಡಿರುವ ಸಿಎಂ ಬಿಎಸ್ವೈ, ನಾಯಕತ್ವ ಬದಲಾವಣೆಗೆ ಕಾದು ನೋಡೋಣ ಅಂತ ಹೇಳುವ ಮೂಲಕ ಹೈಕಮಾಂಡ್ಗೆ ಸಂದೇಶ ರವಾನಿಸಿದ್ರಾ ಅನ್ನೋ ಚರ್ಚೆಗಳು ಕಮಲ ಪಾಳಯದಲ್ಲಿ ಆರಂಭಗೊಂಡಿವೆ.
ಸಿಎಂ ಹೇಳಿದ್ದೇನು?:
ಕೋವಿಡ್, ಪ್ರವಾಹ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಬೇಡ ಎಂಬ ರೀತಿಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿಗಳು ಕಾದು ನೋಡೋಣ ಅಂತಾ ಹೇಳಿದರು. ನಾಳೆ ಸಾಧ್ಯವಾದರೆ ಮಧ್ಯಾಹ್ನ ಬಳಿಕ ಕಾರವಾರಕ್ಕೆ ಭೇಟಿ ನೀಡುವೆ. ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಿದ್ದೇನೆ. ಚುನಾವಣೆಗೆ ಒಂದು ಮುಕ್ಕಾಲು ವರ್ಷ ಇದೆ. ಹಾಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ನೂರು ಸಿದ್ದರಾಮಯ್ಯ ಬಂದ್ರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬರಲಿದೆ ಎಂದು ಭವಿಷ್ಯ ನುಡಿದರು.
Advertisement
ಭಾರಿ ಮಳೆ, ಪ್ರವಾಹದಿಂದ ಬಾಧಿತಗೊಂಡಿರುವ ಬೆಳಗಾವಿಯ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಬಳಿಕ ಕಾಳಜಿ ಕೇಂದ್ರಕ್ಕೆ ತೆರಳಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಾಯಿತು. ಮನೆಗಳ ನಿರ್ಮಾಣ ಸೇರಿದಂತೆ ಸಂತ್ರಸ್ತರಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಹಾಗೂ ಪರಿಹಾರವನ್ನು ಸರ್ಕಾರದಿಂದ ಒದಗಿಸಲಾಗುವುದು pic.twitter.com/uE7YgeUpXa
— B.S.Yediyurappa (@BSYBJP) July 25, 2021
Advertisement
ಇದೇ ವೇಳೆ ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ವೈ, ನಮ್ಮ ರಾಜ್ಯದಲ್ಲಿ ಬೇರೆ ಯಾರಿಗೂ ಸಿಗದ ಸ್ಥಾನಮಾನ ನನಗೆ ಸಿಕ್ಕಿದೆ. ಅದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾಗೆ ವಂದನೆ ಸಲ್ಲಿಸುವೆ. ಪಕ್ಷದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು. ಇನ್ನೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಕಾದು ನೋಡೋಣ ಎಂದು ಮೂರು ಬಾರಿ ಹೇಳಿ ಹೊರಟರು.
Advertisement
Advertisement
ಸಿ.ಟಿ.ರವಿ ಹೇಳಿದ್ದೇನು? ಯಡಿಯೂರಪ್ಪನವರು ಜನಪ್ರಿಯ ನಾಯಕರು, ಬಿಎಸ್ವೈ ಅವರ ಜನಪ್ರಿಯತೆಯನ್ನು ಎಲ್ಲರೂ ಒಪ್ಪಿಕೊಳ್ಳಲೇಬೇಕು. ಅವರೊಬ್ಬ ಉತ್ತಮ ನಾಯಕ, ಅದರಂತೆ ಪಕ್ಷ ಅವರಿಗೆ ಸಾಕಷ್ಟು ಅವಕಾಶಗಳನ್ನ ನೀಡಿದೆ. ಇದಕ್ಕಾಗಿಯೇ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿ ಕರ್ನಾಟಕ ಜನತೆ ಸೇವೆ ಮಾಡಲು ಅವಕಾಶ ಸಿಕ್ಕಿದೆ. ವಿಪಕ್ಷ ನಾಯಕರಾಗಿ, ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಪಕ್ಷ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಸೈಕಲ್ ಏರಿ ತೇಜಸ್ವಿಸೂರ್ಯ ಸಿಟಿ ರೌಂಡ್ಸ್- ಮಾಸ್ಕ್ ಎಲ್ಲಿ ಎಂದ ನೆಟ್ಟಿಗರು
ಕಾಂಗ್ರೆಸ್, ಜನತದಳ, ಕಮ್ಯೂನಿಸ್ಟ್ ಪಕ್ಷಗಳಲ್ಲಿ ಈ ರೀತಿ ಅವಕಾಶ ನೀಡಿಲ್ಲ, ಬಿಜೆಪಿ ಎಲ್ಲ ಅವಕಾಶವನ್ನು ಅವರಿಗೆ ನೀಡಿದೆ. ಬಿಜೆಪಿ ಕಾರ್ಯಕರ್ತನಿಂದ ಹಿಡಿದು ನಾಯಕನಾಗಿ ಬೆಳೆಯುವಂತೆ ಅವಕಾಶ ನೀಡಿದೆ. ಎಲ್ಲ ಕಾರ್ಯಕರ್ತರ ಶಕ್ತಿಯಿಂದ ಇಂದು ಬಿಜೆಪಿಗೆ ಶಕ್ತಿ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ: ನಡ್ಡಾ