– ಕಲಬುರಗಿಯಲ್ಲಿ 159 ಪ್ರಕರಣ ಪತ್ತೆ
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಇಂದು ಮೂರು ಸಾವಿರದ ಗಡಿ ದಾಟಿದ್ದು, 3082 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲೇ ಬರೋಬ್ಬರಿ 2004 ಕೇಸ್ ಪತ್ತೆಯಾಗಿವೆ. ರಾಜ್ಯದಲ್ಲಿ ಮಹಾಮಾರಿಗೆ 12 ಮಂದಿ ಬಲಿಯಾಗಿದ್ದಾರೆ.
ಇಂದಿನ 28/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/WJmE8AJ5pf @mla_sudhakar @Comm_dhfwka @MDNHM_Kar @KarnatakaVarthe @PIBBengaluru @CovidKarnataka pic.twitter.com/cys2EBByI3
— K’taka Health Dept (@DHFWKA) March 28, 2021
Advertisement
ರಾಜ್ಯದಲ್ಲಿ ಇಂದು ಬರೋಬ್ಬರಿ 3082 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 2 ಸಾವಿರದ ಗಡಿ ದಾಟಿದ್ದು, 2004 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ 7 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 204 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 79, ಕಲಬುರಗಿ 17, ತುಮಕೂರು 14 ಹಾಗೂ ಮಂಡ್ಯದಲ್ಲಿ 10 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ. ಇಂದು 1,285 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.89ರಷ್ಟು ಮತ್ತು ಮರಣ ಪ್ರಮಾಣ ಶೇ.0.38ರಷ್ಟಿದೆ. ಬೆಂಗಳೂರು ನಗರದ ಬಳಿಕ ಕಲಬುರಗಿಯಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇಂದು ಒಟ್ಟು 3,806 ಜನರಿಗೆ ಲಸಿಕೆ ನೀಡಲಾಗಿದೆ.
Advertisement
ಬೆಂಗಳೂರಿನ ಹೊರತುಪಡಿಸಿ ಕಲಬುರಗಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 159 ಜನರಿಗೆ ಸೋಂಕು ತಗುಲಿದೆ. ಒಬ್ಬರು ಸಾವನ್ನಪ್ಪಿದ್ದಾರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 952ಕ್ಕೆ ಏರಿಕೆಯಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಉಡುಪಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಉಡುಪಿಯಲ್ಲಿ ಇಂದು 115 ಪ್ರಕರಣಗಳು ಪತ್ತೆಯಾಗಿವೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 53, ಬೆಳಗಾವಿ 36, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 2,004, ಬೀದರ್ 63, ಚಾಮರಾಜನಗರ 9, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 8, ಚಿತ್ರದುರ್ಗ 12, ದಕ್ಷಿಣ ಕನ್ನಡ 68, ದಾವಣಗೆರೆ 7, ಧಾರವಾಡ 60, ಗದಗ 14, ಹಾಸನ 65, ಹಾವೇರಿ 2, ಕಲಬುರಗಿ 159, ಕೊಡಗು 14, ಕೋಲಾರ 9, ಕೊಪ್ಪಳ 20, ಮಂಡ್ಯ 34, ಮೈಸೂರು 114, ರಾಯಚೂರು 13, ರಾಮನಗರ 3, ಶಿವಮೊಗ್ಗ 33, ತುಮಕೂರು 59, ಉಡುಪಿ 115, ಉತ್ತರ ಕನ್ನಡ 11, ವಿಜಯಪುರ 24 ಮತ್ತು ಯಾದಗಿರಿಯಲ್ಲಿ 9 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.