ನವದೆಹಲಿ: ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.
ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ಭೇಟಿ ಮಾಡಿದ ಅವರು, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಜೊತೆಗೆ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆಯೂ ಮನವಿ ಮಾಡಿದರು.
Advertisement
Advertisement
ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ ಯೋಜನೆಗೆ ಅನುಮತಿ ಕೋರಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಶೇಖಾವತ್ ಅವರಿಗೆ ಒತ್ತಾಯಿಸಿದರು. ಇದನ್ನೂ ಓದಿ: ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?
Advertisement
ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾವೇರಿ ನೀರಾವರಿ ನಿಗಮದ ಎಂಡಿ ಜೈಪ್ರಕಾಶ್ ಉಪಸ್ಥಿತರಿದ್ದರು.