ಹಾಸನ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ದಿಲೀಪ್ ಎಂಬವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಹಿಳಾ ಸಿಡಿಪಿಓ ಜೈಕಿರಣ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಹಾಸನ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಡಿಪಿಓ ಜೈಕಿರಣ್, ದಿಲೀಪ್ ಎಂಬವರು ಅನಾವಶ್ಯಕವಾಗಿ ರಾತ್ರಿ ವೇಳೆ ಕರೆ ಮಾಡಿ ನನ್ನೊಂದಿಗೆ ಸಹಕರಿಸು ಎಂದು ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ.
Advertisement
Advertisement
ಜುಲೈ 18ರಂದು ಒಂದು ದಿನ 50 ಬಾರಿ ಕರೆ ಮಾಡಿ ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೂ ದೂರು ನೀಡಿದ್ದೇನೆ. ಅಷ್ಟೇ ಅಲ್ಲದೆ ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಜೈಕಿರಣ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಾಸನ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದಿಲೀಪ್ ನಿರಾಕರಿಸಿದ್ದಾರೆ.