ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸಂಜನಾ ಗಲ್ರಾನಿ ಮಾಡಿರುವ ಖತರ್ನಾಕ್ ಐಡಿಯಾಗೆ ಪೊಲೀಸರೇ ದಂಗಾಗಿ ಹೋಗಿದ್ದಾರೆ.
ಚಂದನವನದಲ್ಲಿ ಡ್ರಗ್ ಘಾಟು ಬರಲಾರಂಭಿಸಿದ ಮೊದಲ ದಿನದಿಂದಲೂ ಸಂಜನಾ ಗಲ್ರಾನಿ ಮೇಲೆ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದರು. ನಿನ್ನೆ ಯಾವುದೇ ನೋಟಿಸ್ ನೀಡದೇ ಏಕಾಏಕಿ ಸಂಜನಾಳ ಇಂದಿರಾನಗರದ ಮನೆ ಮೇಲೆ ಸಿಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಸಂಜನಾಳನ್ನು ವಶಕ್ಕೆ ಪಡೆದು ಅರೆಸ್ಟ್ ಮಾಡಿದ್ದಾರೆ.
Advertisement
Advertisement
ವೇಳೆ ಸಂಜನಾ ಸಾಕ್ಷಿ ನಾಶ ಮಾಡಿದ್ದು, ತನ್ನ ಮೊಬೈಲ್ನಲ್ಲಿದ್ದ ಮೆಸೇಜ್, ಫೋಟೋಸ್ ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಾಟ್ಸಪ್ ಗ್ರೂಪ್ಗಳನ್ನು ಡಿಲೀಟ್ ಮಾಡಿದ್ದಾರೆ. ಡಿಲೀಟ್ ಆದ ಮೆಸೇಜ್ ಗಳನ್ನು ಪೊಲೀಸರು ಸುಲಭವಾಗಿ ರಿಟ್ರೀವ್ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.
Advertisement
Advertisement
ಸಂಜನಾ ಐಫೋನ್ 11 ಪ್ರೋ ಬಳಸುತ್ತಿರುವ ಕಾರಣ ಕಷ್ಟ ಎಂದು ಪೊಲೀಸರು ಹೇಳುತ್ತಿದ್ದರು. ಆದರೆ ಪೊಲೀಸರು ಟೆಲಿಕಾಂ ಕಂಪನಿ ಬಳಿ ಕೇಳಿದರೆ ಎಲ್ಲ ಸಂದೇಶಗಳನ್ನು ನೀಡಬೇಕಾಗುತ್ತದೆ. ಸಂಜನಾ ಒಂದು ವೇಳೆ ವಾಟ್ಸಪ್ ಬ್ಯಾಕಪ್ ಮಾಡಲು ಒಪ್ಪದೇ ಇದ್ದಾಗ ಪೊಲೀಸರು ವಾಟ್ಸಪ್ ಕಂಪನಿ ಪತ್ರ ಬರೆದು ಮಾಹಿತಿ ನೀಡುವಂತೆ ಕೇಳಬೇಕಾಗುತ್ತದೆ.
ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ವಿರುದ್ಧ ಕಳೆದ ವಾರ ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಹೀಗಾಗಿ ಸೂಕ್ತ ಸಾಕ್ಷ್ಯಕ್ಕಾಗಿ ಕಾಯುತ್ತಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಹಲವು ಮಾಹಿತಿಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕಸ್ಟಡಿಯಲ್ಲಿರುವ ಸಂಜನಾ ಹೊಸ ವರೆಸೆಯನ್ನು ತೆಗೆದಿದ್ದು, ಸಿಸಿಬಿ ಪೊಲೀಸರ ಜೊತೆ ದಯವಿಟ್ಟು ಮಾಧ್ಯಮಗಳ ಜೊತೆ ಮಾತನಾಡಲು ಒಂದು ಬಾರಿ ಅವಕಾಶ ಕೊಡಿ ಎಂದು ಕಣ್ಣೀರು ಹಾಕಿದ್ದಾರೆ. ಒಂದು ಬಾರಿ ಅವಕಾಶ ನೀಡುವಂತೆ ಸಿಬ್ಬಂದಿ ಜೊತೆ ಸಂಜನಾ ರಾತ್ರಿಯೂ ಕೇಳಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಂಧನದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಲು ಸಂಜನಾ ಇಚ್ಛೆ ವ್ಯಕ್ತಪಡಿಸಿದ್ದರು.