ಮಂಡ್ಯ: ರೈತರ ಪಾಲಿಗೆ ಜೀವ ನಾಡಿಯಾಗಿದ್ದ ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಯದುವೀರ್ ಫೇಸ್ಬುಕ್ನಲ್ಲಿ, ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದು ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ನೀಡಿ ಪೋಸ್ಟ್ ಮಾಡಿದ್ದಾರೆ.
Advertisement
Advertisement
ಪೋಸ್ಟ್ನಲ್ಲಿ ಏನಿದೆ?
ಮಂಡ್ಯ ಜಿಲ್ಲೆಯು ಕಬ್ಬುಬೆಳೆ ಮತ್ತು ಸಕ್ಕರೆ ಉತ್ಪಾದನೆಯಲ್ಲಿ ಸಮಾನವಾಗಿದೆ. ಮೈಶುಗರ್ ಕಾರ್ಖಾನೆಯ ಪರಂಪರೆಯ ದೃಷ್ಟಿಯಿಂದ ಖಾಸಗೀಕರಣಕ್ಕೆ ನಿರಂತರ ಪ್ರತಿರೋಧ ವ್ಯಕ್ತವಾಗುತ್ತಿರುವುದು ಅರ್ಥವಾಗುವಂತಹದ್ದಾಗಿದೆ. ಆದರೆ ಪ್ರತಿರೋಧವು ಕಳವಳಕ್ಕೆ ಕಾರಣವಾಗಿದೆ. ಏಕೆಂದರೆ ಮಂಡ್ಯ ಜಿಲ್ಲೆಯ ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದಿದ್ದಾರೆ.
Advertisement
Advertisement
“ಕಾರ್ಖಾನೆಯನ್ನು ನಡೆಸುವಲ್ಲಿ ಸರ್ಕಾರದ ವೈಫಲ್ಯ ಮತ್ತು ಸಂಪೂರ್ಣ ಖಾಸಗೀಕರಣದ ವಿರುದ್ಧ ಸಾರ್ವಜನಿಕರ ಭಾವನೆಯ ನಡುವೆ ನಮಗೆ ಇರುವ ಒಂದು ಆಯ್ಕೆಯೆಂದರೆ, ಕಾರ್ಯಾಚರಣೆ ಮತ್ತು ನಿರ್ವಹಣೆ (operations and maintenance) ವ್ಯವಸ್ಥೆಯಡಿಯಲ್ಲಿ ಸಕ್ಕರೆ ಕಾರ್ಖಾನೆಯನ್ನು ನಡೆಸುವುದು. ಈ ಮಧ್ಯಮ ವ್ಯವಸ್ಥೆಯು ಖಾಸಗೀಕರಣದ ವಿರುದ್ಧ ಸಾರ್ವಜನಿಕರಿಗಿರುವ ಭಾವನೆಯನ್ನು ತೃಪ್ತಿಪಡಿಸುವುದಲ್ಲದೆ ಕಾರ್ಖಾನೆಯು ಮತ್ತೊಮ್ಮೆ ಸಮೃದ್ಧಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ. ಇದರಿಂದ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಯಾವುದೇ ಸಂಕಷ್ಟಗಳನ್ನು ಎದುರಿಸಬೇಕಾಗಿರುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.
ಮೈಶುಗರ್ ಕಾರ್ಖಾನೆಯನ್ನು ಮೈಸೂರಿನ ಮಹಾರಾಜರು ಸ್ಥಾಪಿಸಿರುವ ಸಕ್ಕರೆ ಕಾರ್ಖಾನೆಯಾಗಿದೆ. ಹೀಗಾಗಿ ರೈತರ ಕಷ್ಟಕ್ಕೆ ಯದುವೀರ್ ಸ್ಪಂದಿಸಿದ್ದು, ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ಸೂಚಿಸಿದ್ದಾರೆ.