ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡುವ ಮೂಲಕ ಮೈಸೂರು ವಿವಿಯೂ ಸ್ಟೂಡೆಂಟ್ಗಳ ಆತಂಕ ದೂರ ಮಾಡಿದೆ.
2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ. ಕೋವಿಡ್ ಹಿನ್ನೆಲೆ ಮೈಸೂರು ವಿವಿ ಈ ನಿರ್ಧಾರ ಪ್ರಕಟಿಸಿದೆ. ಕಳೆದ ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕದ ಆಧಾರದ ಮೇಲೆ ಪಾಸ್ ಮಾಡಲಾಗಿದ್ದು, ಸದ್ಯ ಫೇಲ್ ಆಗಿರುವ ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಡೆ ನೀಡಲಾಗಿದೆ. ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ನಲ್ಲಿನ ವಿಷಯಗಳು ಬಾಕಿಯಿದ್ದರೂ ಸಮಸ್ಯೆ ಇಲ್ಲ. 1ನೇ ಮತ್ತು 3ನೇ ಸೆಮಿಸ್ಟರ್ ನಲ್ಲಿ ಪಾಸ್ ಆದರೆ ಬಾಕಿ ವಿಷಯಗಳು ಪಾಸ್ ಎಂದು ಘೋಷಿಸಲಾಗಿದೆ.
Advertisement
Advertisement
ಅಂತಿಮ ವರ್ಷದ ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ಮಾಡಲಾಗಿದೆ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ. ಮಹದೇವನ್ ತಿಳಿಸಿದ್ದಾರೆ. ಸರ್ಕಾರದ ಅನುಮತಿಯಂತೆ ವಿವಿ ತಜ್ಞರ ಸಲಹೆ ಸೂಚನೆಗಳಂತೆ ಮೊದಲು ಮತ್ತು ಮೂರನೇ ಸೆಮಿಸ್ಟರ್ ನಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ 2 ಮತ್ತು 4ನೇ ಸೆಮಿಸ್ಟರ್ ಪಾಸ್ ಮಾಡಲಾಗಿದೆ. ಅಂಕಪಟ್ಟಿಯನ್ನು ನೀಡಲಾಗಿದೆ. ಈ ಅಂಕಪಟ್ಟಿಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಪರೀಕ್ಷೆ ಬರೆದು ಪಾಸ್ ಆದ ರೀತಿಯಲ್ಲೇ ಅಂಕ ಪಟ್ಟಿ ಇರಲಿದೆ.