ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿತಿಂಗಳು ನಡೆಸುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಟ್ವೀಟ್ ಮಾಡುವ ಮೂಲಕವಾಗಿ ಸಂತಸ ವ್ಯಕ್ತಪಡಿಸಿದ್ದಾರೆ.
India salutes our Nari Shakti. #MannKiBaat pic.twitter.com/iBjroqwJgz
— PMO India (@PMOIndia) January 31, 2021
Advertisement
ಪ್ರಧಾನಿ ಮೋದಿ ಅವರು ಮನದ ಮಾತು ಸರಣಿಯ 73ನೇ ಹಾಗೂ ಈ ವರ್ಷದ ಮೊದಲ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ್ದರು. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ನಾಲ್ವರು ಮಹಿಳಾ ಪೈಲಟ್ಗಳು, ಸ್ಯಾನ್ ಫ್ರಾನ್ಸಿಸ್ಕೊ-ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣವಾಗಿ ಕ್ರಮಿಸಿ ಇತಿಹಾಸ ನಿರ್ಮಿಸಿದ್ದಾರೆ. ದೇಶದ ಪ್ರಮುಖ ವಿಚಾರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿರುವ ಕುರಿತಾಗಿ ಮೆಚ್ಚುಗೆಯ ಮಾತನಾಡಿದ್ದರು.
Advertisement
“Be the change you wish to see in the world.”-Mahatma Gandhi
These words couldn’t be truer for these incredible women and for every single woman around the world!#NariShakti #MannKiBaat @PMOIndia https://t.co/DPYzBXNfYt
— Deepika Padukone (@deepikapadukone) January 31, 2021
Advertisement
ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಶ್ಲಾಘಿಸಿದ್ದರು. ಈ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಸಾಮಾಜಿಕಜಾಲತಾಣದಲ್ಲಿ ಬರೆದುಕೊಳ್ಳುವ ಮೂಲಕವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಸಾಧನೆಗಳ ಬಿಂಬಿಸುವ ಚಿತ್ರಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾರತ ನಮ್ಮ ನಾರೀಯರ ಶಕ್ತಿಗೆ ನಮಿಸುತ್ತದೆ ಎಂದು ಬರೆದುಕೊಂಡು ಟ್ವೀಟ್ ಮಾಡಿದ್ದರು.
Advertisement
ಪ್ರಧಾನಿಯವರು ಮಾಡಿರುವ ಈ ಟ್ವೀಟ್ ಅನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ರೀಟ್ವೀಟ್ ಮಾಡಿಕೊಂಡಿದ್ದಾರೆ. ನೀವು ಜಗತ್ತಿನಲ್ಲಿ ಕಾಣಬಯಸುವ ಬದಲಾವಣೆಯನ್ನು ನಿಮ್ಮಲ್ಲಿ ತಂದುಕೊಳ್ಳಿ ಎಂಬ ಮಹಾತ್ಮಾ ಗಾಂಧಿಯವರ ಮಾತನ್ನು ಉಲ್ಲೇಖಿಸಿ, ಈ ಪದಗಳು ಈ ಅಸಾಮಾನ್ಯ ಮಹಿಳೆಯರು ಮತ್ತು ಪ್ರಪಂಚದಾದ್ಯಂತ ಇರುವ ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ನಿಜವಾಗಲಾರವು ಎಂದು ಬರೆದುಕೊಂಡಿದ್ದಾರೆ.