ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸಿದ ಆರೋಪದಡಿ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸಿದ ಆರೋಪದಡಿ ಜಿತೇಂದ್ರ ತಿವಾರಿ ಅಲಿಯಾಸ್ ಜೀತುನನ್ನು ಬಂಧಿಸಲಾಗಿದೆ. ಪ್ರಧಾನಿಯ ಸಹೋದರನ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾನೆ ಎಂಬ ಮಾಹಿತಿಯನ್ನು ಪ್ರಧಾನ ಮಂತ್ರಿ ಕಚೇರಿಯು ಪೊಲೀಸರಿಗೆ ನೀಡಿತ್ತು. ಈ ಕುರಿತಾಗಿ ತನಿಖೆ ನಡೆಸುತ್ತಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Advertisement
Advertisement
ತಿವಾರಿಯನ್ನು ವಿಕಾಸ್ ಭವನದ ಬಳಿ ಸೋಮವಾರ ಆರೋಪಿಯನ್ನು ಬಂಧಿಸಲಾಗಿದೆ. ಗುಜರಾತ್ನ ಮಾಧವ್ಪುರದಲ್ಲಿ ಜನವರಿ 4 ರಂದು ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಪ್ರಸ್ತಾಪಿಸಿದ ಕಾರ್ಯಕ್ರಮವೊಂದರ ಪೋಸ್ಟರ್ ಅನ್ನು ತಿವಾರಿ ತನ್ನ ಕಾರಿನಲ್ಲಿ ಅಂಟಿಸಿಕೊಂಡು ಜನರಿಗೆ ವಂಚನೆ ಮಾಡುತ್ತಿದ್ದನು ಎಂದು ನಗರ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಭುಪೇಂದ್ರ ಸಿಂಗ್ ಅವರು ಹೇಳಿದ್ದಾರೆ.
Advertisement