ನವದೆಹಲಿ: ಸಿಎಂ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲುವು ಯೋಜನೆ, ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಪುನಾರಚನೆ ವದಂತಿಗಳ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸಕ್ಕೆ ತೆರಳಿದ್ದಾರೆ. ಸಿಎಂ ಜೊತೆ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಹಾಗೂ ಲೆಹರ್ ಸಿಂಗ್ ಸೇರಿದಂತೆ 7 ಮಂದಿ ಜೊತೆಗಿದ್ದಾರೆ.
Advertisement
The newly inducted Union Ministers from Karnataka @ShobhaBJP, @Rajeev_GoI, @ANarayana_swamy and @bhagwantkhuba met me in New Delhi today. pic.twitter.com/KNwHaWp4wK
— B.S.Yediyurappa (@BSYBJP) July 16, 2021
Advertisement
ಸಂಜೆ ಲೋಕ ಕಲ್ಯಾಣ ಮಾರ್ಗಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿಯನ್ನು ಭೇಟಿಯಾಗಿದ್ದರು. ಮೇಕೆದಾಟು ಯೋಜನೆಗೆ ಅನುಮತಿ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ, ಪೆರಿಫೆರಲ್ ರಿಂಗ್ ರೋಡ್ಗೆ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದರು. ಇದನ್ನೂ ಓದಿ: ಜನ ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡಿಕೊಳ್ಳದಿರುವುದು ಆತಂಕಕ್ಕೆ ಕಾರಣ: ಮೋದಿ
Advertisement
ರಾಜ್ಯದ ನೂತನ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ನಾಳೆ ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ ಜೊತೆ ಚರ್ಚೆ ಮಾಡಲಿದ್ದಾರೆ. ನಾಯಕತ್ವ ಬಿಕ್ಕಟ್ಟು, ಸಂಪುಟ ಪುನಾರಚನೆ, ಭಿನ್ನಮತೀಯರ ಬಗ್ಗೆ ವಾರ್ನಿಂಗ್ ನೀಡುವ ಬಗ್ಗೆ ಸಿಎಂ ಚರ್ಚಿಸಲಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
Advertisement
Called on Hon'ble Prime Minister Shri @narendramodi ji in New Delhi today. Had a fruitful discussion on various development projects of the state.@PMOIndia pic.twitter.com/HjoHy6Y2zI
— B.S.Yediyurappa (@BSYBJP) July 16, 2021
ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ, ಮುಂದಿನ ವಾರ ದೆಹಲಿಗೆ ವಲಸಿಗ ಸಚಿವರು ಭೇಟಿ ನೀಡುತ್ತಿದ್ದಾರೆ. ಸಂಪುಟದಿಂದ ಕೈಬಿಡದಂತೆ ವರಿಷ್ಠರ ಮೇಲೆ ಒತ್ತಡ ಹೇರಲು ಕಾರ್ಯತಂತ್ರ ರೂಪಿಸಿದ್ದಾರೆ.