ನವದೆಹಲಿ: ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿ ಬರುತ್ತಿದೆ. ಶಾಸಕರು ಸಚಿವರೇ ಬಿಎಸ್ವೈ ವಿರುದ್ಧ ಹೈಕಮಾಂಡ್ಗೆ ದೂರು ನೀಡಿದ್ದು ಬಿ.ವೈ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಬಿಎಸ್ವೈ ದೆಹಲಿ ಪ್ರವಾಸ ವೇಳೆ ಈ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ವಿರೋಧದ ನಡುವೆಯೇ ಬಿಎಸ್ವೈ ಮತ್ತಷ್ಟು ದಿನಗಳ ಕಾಲ ಮುಂದುವರಿಯಲು ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.
Advertisement
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮೊದಲ ಬಾರಿಗೆ ಧ್ವನಿಗೂಡಿಸಿದ್ದು ಬಿಎಸ್ವೈ ವಿರುದ್ಧ ಪರೋಕ್ಷವಾಗಿ ನಾಯಕತ್ವ ಪ್ರಶ್ನಿಸಿದ್ದಾರೆ.
Advertisement
Advertisement
ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿಯಲ್ಲಿ 75 ವರ್ಷ ಆದವರಿಗೆ ಅಧಿಕಾರ ಇಲ್ಲ ಎಂಬ ನಿಯಮವಿದೆ. ಇದೇ ಕಾರಣಕ್ಕೆ 8 ಬಾರಿ ಗೆದ್ದಿದ್ದ ಸುಮಿತ್ರಾ ಮಹಾಜನ್ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ ಆದರೆ ಯಡಿಯೂರಪ್ಪ ವಿಚಾರದಲ್ಲಿ ಏಕೆ ನಿಯಮ ಸಡಿಲಿಸಿದ್ದಾರೋ ಗೊತ್ತಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ದನಿಗೂಡಿಸಿದ್ದಾರೆ.
Advertisement
ವಯಸ್ಸಿನ ಹಿನ್ನಲೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದೆ. ಆದರೆ ಒತ್ತಡದ ಮೇಲೆ ಸ್ಪರ್ಧಿಸಿದ್ದೆ. ಇದಾದ ಬಳಿಕ ಸೋನಿಯಾ ಗಾಂಧಿ ರಾಜ್ಯಸಭೆಗೆ ಬರುವಂತೆ ಒತ್ತಾಯಿಸಿದ್ದರು. ರಾಜ್ಯದ 3 ಪಕ್ಷಗಳು ಅವಿರೋಧವಾಗಿ ಒಪ್ಪಿದ್ದರಿಂದ ರಾಜ್ಯಸಭೆಗೆ ಬಂದಿದ್ದೇನೆ. ದೇವರ ಆಟ ಏನೇನಿದೆಯೋ ಗೊತ್ತಿಲ್ಲ ಎಂದರು.