– ನಿಮ್ಮ ಮಾರ್ಗದರ್ಶನ ನಮಗೆಲ್ಲರಿಗು ಇರಲೇಬೇಕು
ಬೆಂಗಳೂರು: ಕೊನೆಗೂ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಶಾಸಕರು, ಇಂದು ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.
Advertisement
ದಶಕಗಳ ನಿಮ್ಮ(BSY)ಸಂಘಟನೆ ಮತ್ತು ರಾಜಕೀಯ ಸೇವೆ ಲಕ್ಷಾಂತರ ಕಾರ್ಯಕರ್ತರು ಮತ್ತು ಅನೇಕ ನಾಯಕರನ್ನು ಸೃಷ್ಟಿಸಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅಪಾರ. ಮುಂದೆಯು ನಿಮ್ಮ ಮಾರ್ಗದರ್ಶನ ನಮಗೆಲ್ಲರಿಗು ಇರಲೇಬೇಕು.
ನನ್ನ ರಾಜಕೀಯ ಜೀವನದ ಆದಿಯಿಂದ ಇಂದಿನವರೆಗೆ ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ ಇಂದು pic.twitter.com/UyQGx7WmHx
— M P Renukacharya (@MPRBJP) July 26, 2021
Advertisement
ಟ್ವೀಟ್ ನಲ್ಲೇನಿದೆ..?
ದಶಕಗಳ ನಿಮ್ಮ(BSY)ಸಂಘಟನೆ ಮತ್ತು ರಾಜಕೀಯ ಸೇವೆ ಲಕ್ಷಾಂತರ ಕಾರ್ಯಕರ್ತರು ಮತ್ತು ಅನೇಕ ನಾಯಕರನ್ನು ಸೃಷ್ಟಿಸಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅಪಾರ. ಮುಂದೆಯು ನಿಮ್ಮ ಮಾರ್ಗದರ್ಶನ ನಮಗೆಲ್ಲರಿಗು ಇರಲೇಬೇಕು. ನನ್ನ ರಾಜಕೀಯ ಜೀವನದ ಆದಿಯಿಂದ ಇಂದಿನವರೆಗೆ ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ ಇಂದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ರಾಜ್ಯಪಾಲರ ಹುದ್ದೆ ಅಲಂಕರಿಸಲ್ಲ, ಪಕ್ಷ ಸಂಘಟನೆ ಮಾಡುತ್ತೇನೆ: ಬಿಎಸ್ವೈ
Advertisement
Advertisement
ಕಳೆದ ಹಲವು ದಿನಗಳಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳು ಎದ್ದಿತ್ತು. ಇಂದು ಈ ಊಹಾಪೋಹಗಳಿಗೆ ಇಂದು ತೆರೆಬಿದ್ದಿದ್ದು, ತಮ್ಮ ಎರಡು ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಹಾಭಾಷಣ ಮಾಡಿ, ತಾವು ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆ ಮಾಡಿದರು. ಅದರಂತೆ ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು ಸೂಚಿಸಿಲ್ಲ ಮತ್ತು ಸೂಚಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ದೆಹಲಿಯಿಂದ ಒತ್ತಡ ಇಲ್ಲ, ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ: ಬಿಎಸ್ವೈ