ಬೆಂಗಳೂರು: ರಂಜಾನ್ ಹಬ್ಬದ ಪ್ರಯುಕ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.
ಭಾನುವಾರವೇ ಈ ಸಂಬಂಧ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡಿ “ಮೇ 25ರ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದರ್ಶನ್ ಅವರ ಖಾತೆಯಿಂದ ಪೋಸ್ಟರ್ ಬಿಡುಗಡೆಯಾಗಲಿದೆ” ಎಂದು ತಿಳಿಸಿದ್ದರು. ಅದರಂತೆಯೇ ಚಿತ್ರದ ಪೋಸ್ಟರ್ ನಟ ದರ್ಶನ್ ಅವರ ಖಾತೆಯಿಂದ ಬಿಡುಗಡೆಯಾಗಿದೆ.
Advertisement
Hi all… #Roberrt new poster for #Ramadan will be released tomorrow (25th May) @ 11: 05am from #DBoss @dasadarshan twitter ID. ????????????@UmapathyFilms @aanandaaudio
— Tharun Sudhir (@TharunSudhir) May 24, 2020
Advertisement
ಬಿಡುಗಡೆಯಾಗಿರುವ ಪೋಸ್ಟರಿನಲ್ಲಿ ದರ್ಶನ್ ಉದ್ದ ಕೂದಲು, ಗಡ್ಡ ಬಿಟ್ಟಿದ್ದು, ಕೂಲಿಂಗ್ ಗ್ಲಾಸ್ ಹಾಕಿಕೊಂಡು ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.
Advertisement
“ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ ‘ರಾಬರ್ಟ್’ ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ, ಮನೆಯವರಿಗಾಗಿ ಜಾಗೃತರಾಗಿರಿ” ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ 'ರಾಬರ್ಟ್' ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ , ಮನೆಯವರಿಗಾಗಿ ಜಾಗೃತರಾಗಿರಿ pic.twitter.com/5ZBMIlY9TD
— Darshan Thoogudeepa (@dasadarshan) May 25, 2020
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ರಾಬರ್ಟ್ ಸಿನಿಮಾ ರಿಲೀಸ್ ಆಗಿ, ಐವತ್ತು ದಿನ ಮುಗಿಸಿ, ನೂರನೇ ದಿನದತ್ತ ಭರ್ಜರಿಯಾಗಿ ಓಡುತ್ತಿರಬೇಕಿತ್ತು. ಆದರೆ ಕೊರೊನಾದಿಂದ ಎಲ್ಲವೂ ಉಲ್ಟಾ ಪಲ್ಟಾ ಆಗಿದೆ. ಈ ಮೂಲಕ ವರ್ಷದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಈ ನಡುವೆಯೇ ರಾಬರ್ಟ್ ಸಿನಿಮಾವನ್ನು ಆನ್ಲೈನ್ ಅಲ್ಲಿ ಬಿಡುಗಡೆ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ ಈ ಸುದ್ದಿಯನ್ನು ಉಮಾಪತಿ ಸುಳ್ಳು ಎಂದು ಹೇಳಿದ್ದಾರೆ.