ಮುಂಬೈ: ಮಹಾರಾಷ್ಟ್ರದಲ್ಲಿ ಎಡಬಿಡದೇ ಸುರಿಯುತ್ತಿರುವ ರಣ ಮಳೆಗೆ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ ಮತ್ತು ಹಲವಾರು ಜಿಲ್ಲೆಗಳಲ್ಲಿ ಭೂ ಕುಸಿತ ಮತ್ತು ಪ್ರವಾಹ ಸಂಭವಿಸಿದೆ.
Advertisement
ಸಶಸ್ತ್ರ ಪಡೆಗಳು ಮತ್ತು ಎನ್ಆರ್ಎಫ್ ತಂಡ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ತಕ್ಷಣಕ್ಕೆ ಮಳೆ ನಿಲ್ಲುವಂತೆ ಕಾಣಿಸುತ್ತಿಲ್ಲ. ಅಲ್ಲದೇ ಮಹಾರಾಷ್ಟ್ರದ ಕರಾವಳಿ ಕೊಂಕಣ, ಪುಣೆಯ ರಾಯಗಡ, ರತ್ನಾಗಿರಿ, ಸಿಂಧುದುರ್ಗ್, ಪಶ್ಚಿಮ ಮಹಾರಾಷ್ಟ್ರದ ಸತಾರಾ ಮತ್ತು ಕೊಲ್ಹಾಪುರದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ಈ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
Advertisement
ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ ದಕ್ಷಿಣ ಗೋವಾದ ದೂಧ್ ಸಾಗರ್ ಮತ್ತು ಸೋನೌಲಿಮ್ ನಡುವಿನ ಪ್ಯಾಸೆಂಜರ್ ರೈಲು ಮತ್ತು ವಶಿಷ್ಠಿ ನದಿ ಉಕ್ಕಿ ಹರಿದ ಪರಿಣಾಮ ಮಹಾರಾಷ್ಟ್ರದ ಚಿಪ್ಲುನ್ ಮತ್ತು ಕಾಮಥೆ ನಡುವಿನ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ.
Advertisement
Advertisement
ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ ಮತ್ತು ಪ್ರವಾಹ ಉಂಟಾಗಿದ್ದು, ಸುಮಾರು 136 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿಯೂ ರಾಯಗಡ ಹಾಗೂ ಸತಾರಾ ಜಿಲ್ಲೆಯಲ್ಲಿ ಹೆಚ್ಚಿನ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ಶ್ವಾನದ ಸವಿನೆನಪಿಗೆ ಕಂಚಿನ ಪ್ರತಿಮೆ – ಬಿಡಿಸಲಾಗದ ಮಾಲೀಕ, ಶ್ವಾನದ ನಂಟು
Maharashtra: NDRF (National Disaster Response Force) team carries out rescue and relief operations in the flood-affected lower Chiplun area in Ratnagiri district. pic.twitter.com/abmUZpF3hf
— ANI (@ANI) July 24, 2021