– ಮಾಜಿ ಸಚಿವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ್ರು
ನೆಲಮಂಗಲ: ರಾಜ್ಯದಲ್ಲಿ ಸಂಚಲನ ಹುಟ್ಟಿಸಿರುವ ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ, ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸುವಂತೆ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ಒತ್ತಾಯಿಸಿದೆ.
Advertisement
ಬೆಂಗಳೂರು ಹೊರವಲಯ ನೆಲಮಂಗಲದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ಮೂಲಕ ಜಾಥಾ ನಡೆಸಿ ಡಿ.ಕೆ ಶಿವಕುಮಾರ್ ಅಭಿಮಾನಿ ಸಂಘದಿಂದ ನೂರಾರು ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
Advertisement
Advertisement
ಡಿ.ಕೆ ಶಿವಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಡಿಕೆ ಶಿವಕುಮಾರ್ ಬಗ್ಗೆ ಅವಹೇಳನ ಶಬ್ಧ ಬಳಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿದರು. ಅಲ್ಲದೆ ನೆಲಮಂಗಲ ಪ್ರವಾಸಿ ಮಂದಿರದಿಂದ ತಾಲೋಕ್ ಕಚೇರಿವರೆಗೆ ಪ್ಲಕಾರ್ಡ್ ಹಿಡಿದು ನೂರಾರು ಕಾಂಗ್ರೆಸ್ ಕಾರ್ಯಕರ್ತರು ರಮೇಶ್ ಜಾರಕಿಹೊಳಿಯ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಘೋಷಣೆ ಕೂಗಿದರು.
Advertisement
ನಂತರ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು, ಗೃಹ ಸಚಿವ ಹಾಗೂ ಪೊಲೀಸ್ ಇಲಾಖೆ ನೊಂದ ಯುವತಿಗೆ ನ್ಯಾಯ ನೀಡಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮವಹಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸುರೇಶ್, ಸಪ್ಪಗಿರಿ ಶಂಕರ್ ನಾಯಕ್, ವೆಂಕಟೇಶ್ ಬಾಬು, ರಮೇಶ್, ಉಮೇಶ್ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿ ತಾಲೂಕು ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.