ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಜಲಸಂಪನ್ಮೂಲ ಖಾತೆಯನ್ನು ಹಠಕ್ಕೆ ಬಿದ್ದು ಪಡೆದುಕೊಂಡಿದ್ದ ಸಚಿವ ರಮೇಶ ಜಾರಕಿಹೊಳಿಗೆ ನಿರೀಕ್ಷೆಯಂತೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹೊಣೆ ನೀಡಲಾಗಿದೆ. ಜಾರಕಿಹೊಳಿಯವರಿಗೆ ಡಿಸಿಎಂ ಸ್ಥಾನ ನೀಡುವುದಾಗಿ ಹೇಳಿ ಕೊನೇಯ ಘಳಿಗೆಯಲ್ಲಿ ಕೈ ತಪ್ಪಿದ ಪರಿಣಾಮ ಹುಬ್ಬಳ್ಳಿ-ಧಾರವಾಡ ಜತೆಗೆ ಬೆಳಗಾವಿ ಉಸ್ತುವಾರಿಯನ್ನು ಜಗದೀಶ್ ಶೆಟ್ಟರ್ ಅವರಿಗೆ ವಹಿಸಿದ್ದರು. ಆದರೆ ಜಗದೀಶ್ ಶೆಟ್ಟರ್ ಹಳೆ ಜಿ.ಪಂ. ಕಚೇರಿಯಲ್ಲಿ ತಮ್ಮ ಕಚೇರಿ ತೆರೆದಿದ್ದರೂ ಒಂದೂ ಬಾರಿ ಭೇಟಿಯಾಗಲಿಲ್ಲ. ಈ ಮೂಲಕ ಬೆಳಗಾವಿ ಜನರ ಅಸಮಾಧಾನಕ್ಕೆ ಕಾರಣವಾಗಿದ್ದರು.
Advertisement
Advertisement
ಕೊನೆಗೂ ಸಿಎಂ ಯಡಿಯೂರಪ್ಪ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉಸ್ತುವಾರಿ ನೀಡಿದ್ದು, ಜಿಲ್ಲೆಯ ಜನ ಸಂತಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ರಾಜ್ಯಸಭಾ ಟಿಕೆಟ್ಗಾಗಿ ಪೈಪೋಟಿ ನಡೆತ್ತಿರುವ ಹಿನ್ನೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ ಎನ್ನಲಾಗಿದೆ. ಹಾಸನದ ಉಸ್ತುವಾರಿಯನ್ನು ಸಚಿವ ಗೋಪಾಲಯ್ಯಗೆ ವಹಿಸಿದ್ದಾರೆ.