ಬೆಂಗಳೂರು: ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾಗಿದ್ದು, ಆಕ್ರೋಶ ಹೊರ ಹಾಕುತ್ತಿದ್ದಾರೆ. ಶುಕ್ರವಾರ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಇಂದು ರಾಕ್ಲೈನ್ ವೆಂಕಟೇಶ್ ನಿವಾಸದ ಮುಂದೆ ಅಪಾರ ಪ್ರಮಾಣದ ಕಾರ್ಯಕರ್ತರು ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ರಾಕ್ಲೈನ್ ವೆಂಕಟೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಕೆಎಸ್ಆರ್ ಪಿ ಪೊಲೀಸರು, ಸ್ಥಳೀಯ ಠಾಣೆಯ ಪೊಲೀಸರ ನಿಯೋಜನೆ ಮಾಡಲಾಗಿದ್ದು, ರಾಕ್ಲೈನ್ ಮನೆ ಸಂಪರ್ಕಿಸುವ ರಸ್ತೆಗೆ ಬ್ಯಾರಿಕೇಡ್ ಹಾಕಲಾಗಿದೆ.
Advertisement
Advertisement
ರೆಬೆಲ್ ಸ್ಟಾರ್ ಅಂಬರೀಶ್ ಬಗ್ಗೆ ನಮಗೂ ಅಭಿಮಾನವಿದೆ. ಕುಮಾರಸ್ವಾಮಿ ಬಗ್ಗೆ ಮಾತಾಡೋಕೆ ನೀವು ಯಾರು? ನೀವು ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿ. ಕುಮಾರಸ್ವಾಮಿ ಅವರ ಬಳಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾನಿರತ ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದರು. ಸದ್ಯ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
Advertisement
ರಾಕ್ಲೈನ್ ವೆಂಕಟೇಶ್ ಹೇಳಿದ್ದೇನು?:
ಅಂಬರೀಶ್ ಮುಂದೆ ಕೈ ಕಟ್ಟಿ ಮಾತಾಡುತ್ತಿದ್ರು. ಅವತ್ತು ಅಂಬಿ ಮುಂದೆ 000.5 ವಾಲ್ಯೂಮ್ನಲ್ಲಿ ಅಂದು ಮಾತಾಡ್ತಿದ್ದರು. ಇವತ್ತು ಯಾವ್ ಟೋನ್ನಲ್ಲಿ ಮಾತಾಡ್ತಿದ್ದೀರಾ. ಇದೆಲ್ಲ ಬೇಡ. ಅಂಬರೀಶ್ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದರು ಅಂತ ಹೇಳುತ್ತಿರಾ? ನಿಮ್ಮ ವಕ್ತಾರರ ಕೈಯಲ್ಲಿ ಅಂಬರೀಶ್ ಬಗ್ಗೆ ಮಾತಾಡ್ತೀರಾ? ಅಂಬರೀಶ್ ಸ್ಮಾರಕ ವಿಚಾರ ಕೇಳೋಕೆ ಹೋದಾಗ ಎರಡೂವರೆ ಗಂಟೆ ಕುಮಾರಸ್ವಾಮಿ ಕಾಯಿಸಿದ್ದರು. ದೊಡ್ಡಣ್ಣನ ಕೊಟ್ಟ ಮನವಿ ಪತ್ರವನ್ನ ಮುಖದ ಮೇಲೆ ಬಿಸಾಕಿದ್ರಿ. ಇವನು ಏನ್ ಮಾಡಿದ್ದಾನೇ..ಯಾಕ್ರಿ ಸ್ಮಾರಕ ಮಾಡಬೇಕು ಇವನಿಗೆ ಅಂತ ಕುಮಾರಸ್ವಾಮಿ ಅವಮಾನ ಮಾಡಿದ್ರಿ. ಅಂಬರೀಶ್ ರಿಂದ ಏನೇನು ಲಾಭ ಪಡೆದಿದ್ದೀರಾ ನೆನಪು ಮಾಡಿಕೊಳ್ಳಿ. ಅಂಬರೀಶ್ ಸಾವಿನಲ್ಲಿ ಯಾಕೆ ರಾಜಕೀಯ ಮಾಡ್ತೀರಾ? ಅಂದು ನಿಖಿಲ್ ನಿಲ್ತಾರೆ ಅಂತ ನೀವು ಬಂದು ಕೇಳಿದ್ರೆ ಸುಮಲತಾ ಅವರೇ ನಿಂತು ನಿಖಿಲ್ ಪರ ಕೆಲಸ ಮಾಡೋರು. ಸುಮಲತಾಗೆ ಚುನಾವಣೆಗೆ ನಿಲ್ಲಲು ಇಷ್ಟ ಇರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅಂಬರೀಶ್ ಬಗ್ಗೆ ಮಾತನಾಡುವಾಗ ಪ್ರಜ್ಞೆ ಇರಲಿ: ಹೆಚ್ಡಿಕೆಗೆ ರಾಕ್ಲೈನ್ ವಾರ್ನಿಂಗ್
ಸುಮಲತಾ ಅಡ್ಡ ಮಲಗಿಸಿದ್ರೆ ಅಂತ ಕುಮಾರಸ್ವಾಮಿ ಮಾತಾಡಿದ್ರು. ಅಮೇಲೆ ಕಾವಲು ಕಾಯಬೇಕು ಅಂದೆ ಅಂತ ಹೇಳಿದ್ರಿ. ಚುನಾವಣೆ ಸಮಯದಲ್ಲಿ ಫೈಸ್ಟಾರ್ ಹೋಟೇಲ್ ನಲ್ಲಿ ಕುಳಿತು ನೀವು ಏನ್ ಮಾಡಿದ್ರಿ ಎಲ್ಲರಿಗೂ ಗೊತ್ತು. ಸುಮಲತಾಗೆ ಯಾರೂ ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬೆಲ್ ಸ್ಟಾರ್ ಇದ್ದಾನೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಅವ್ರ ಹೆಸರು ಬಳಸ್ತಿದ್ದೀರಿ: ಸುಮಲತಾ ಕಿಡಿ