ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಸೆರೆವಾಸದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು ಇಡಿ (ಜಾರಿ ನಿರ್ದೇಶನಾಲಯ) ವಿಚಾರಣೆ ನಡೆಸಲಿದೆ. ನಾಳೆಯಿಂದ ಜೈಲಿನಲ್ಲಿಯೇ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ನ್ಯಾಯಲಯದ ಅನುಮತಿ ಪಡೆದುಕೊಂಡಿದೆ.
Advertisement
ಡ್ರಗ್ಸ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆ ಇಡಿ ಪ್ರಕರಣ ದಾಖಲಿಸಿಕೊಂಡಿತ್ತು. ಡ್ರಗ್ಸ್ ಪ್ರಕರಣದಲ್ಲಿ ಇಬ್ಬರೂ ನಟಿಯರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಐದು ದಿನಗಳ ಕಾಲ ಇಡಿ ಅಧಿಕಾರಿಗಳು ಜೈಲಿನಲ್ಲಿ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ. ನಾಳೆಯಿಂದ ಒಟ್ಟು ಐದು ದಿನ ಇಡಿ ಇಬ್ರು ನಟಿಯರನ್ನು ವಿಚಾರಣೆಗೆ ಒಳಪಡಿಸಲಿದೆ. ರವಿಶಂಕರ್, ವೀರೇನ್ ಖನ್ನಾ, ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
Advertisement
ಸಂಜನಾ, ರಾಗಿಣಿ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆhttps://t.co/NfyRTndUxp#CCB #SanjjanaaGalrani #RaginiDwivedi #Sandalwood #Cinema #KannadaNews #DrugsMafia
— PublicTV (@publictvnews) September 24, 2020
Advertisement
ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ. ಪ್ರತೀಕ್ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆ 28 ಕ್ಕೆ ಮುಂದೂಡಿಕೆಯಾಗಿದೆ. ಆರೋಪಿಗಳಾದ ನಿಯಾಜ್ ಅಹಮ್ಮದ್ ಮತ್ತು ವೈಭವ್ ಜೈನ್ ಜಾಮೀನು ಅರ್ಜಿ ಸಹ ಸೆಪ್ಟೆಂಬರ್ 29ಕ್ಕೆ ಮುಂದೂಡಿಕೆಯಾಗಿದೆ.