ನವದೆಹಲಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದ ಭವನದಲ್ಲಿ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಮಾಧ್ಯಮಗಳ ಜೊತೆ ಸಿಎಂ ಯಡಿಯೂರಪ್ಪ ಮಾತನಾಡಿದರು. ನಿನ್ನೆ ಪ್ರಧಾನಿಗಳನ್ನು ಭೇಟಿಯಾಗಿದ್ದು, ಆ ರೀತಿಯ ಮಾತುಕತೆಗಳು ನಡೆದಿಲ್ಲ. ನಾನು ರಾಜೀನಾಮೆಯನ್ನೂ ನೀಡಿಲ್ಲ. ರಾಜ್ಯದ ಅಭಿವೃದ್ಧಿ ಕುರಿತ ಮಾತನಾಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಬರುತ್ತಿದ್ದೇನೆ. ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಎಲ್ಲ ಗಾಳಿಸುದ್ದಿಗಳಿಗೆ ಮುಖ್ಯಮಂತ್ರಿಗಳು ತೆರೆ ಎಳೆದರು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ರಾಜ್ಯಕ್ಕೆ ಹಿಂದಿರುಗಲಿದ್ದಾರೆ.
Advertisement
Advertisement
ಶುಕ್ರವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿಯವರನ್ನು ಭೇಟಿಯಾಗಿದ್ದರು. ಮೇಕೆದಾಟು ಯೋಜನೆಗೆ ಅನುಮತಿ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ, ಪೆರಿಫೆರಲ್ ರಿಂಗ್ ರೋಡ್ಗೆ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಹೇಳಿದ್ದರು. ಜೊತೆಗೆ ರಾಜ್ಯದ ನೂತನ ಸಚಿವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದರು.
Advertisement
Called on Hon'ble Prime Minister Shri @narendramodi ji in New Delhi today. Had a fruitful discussion on various development projects of the state.@PMOIndia pic.twitter.com/HjoHy6Y2zI
— B.S.Yediyurappa (@BSYBJP) July 16, 2021
Advertisement
ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಪುನಾರಚನೆ ವದಂತಿಗಳ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಸಿಎಂ ಜೊತೆ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಹಾಗೂ ಲೆಹರ್ ಸಿಂಗ್ ಸೇರಿದಂತೆ 7 ಮಂದಿ ಜೊತೆಗಿದ್ದಾರೆ.
ಮುಂದಿನ ವಾರ ದೆಹಲಿಗೆ ವಲಸಿಗ ಸಚಿವರು ಭೇಟಿ ನೀಡುತ್ತಿದ್ದಾರೆ. ಸಂಪುಟದಿಂದ ಕೈಬಿಡದಂತೆ ವರಿಷ್ಠರ ಮೇಲೆ ಒತ್ತಡ ಹೇರಲು ಕಾರ್ಯತಂತ್ರ ರೂಪಿಸಿದ್ದಾರೆ. ಈ ಮಧ್ಯೆ, ಮೇಕೆದಾಟು ಯೋಜನೆಗೆ ಆಕ್ಷೇಪಿಸಿ ತಮಿಳುನಾಡು ಸರ್ವಪಕ್ಷ ನಿಯೋಗ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ಗೆ ದೂರು ನೀಡಿದೆ.