ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಅವರು ಕಿಡಿಕಾರಿದ್ದಾರೆ.
ಹೌದು. ಚಿತ್ರಮಂದಿರ ಶೇ.100 ಭರ್ತಿಗೆ ನಿರ್ಬಂಧ ಹೇರಿ, ಶೇ.50 ಭರ್ತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Advertisement
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಧ್ರುವ, ಮಾರ್ಕೆಟ್ನಲ್ಲಿ ಗಿಜಿ ಗಿಜಿ ಜನ ಸೇರುತ್ತಾರೆ. ಬಸ್ಸಿನಲ್ಲೂ ಫುಲ್ ರಶ್ ಇರುತ್ತೆ. ಆದರೆ ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50 ನಿರ್ಬಂಧ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಟ್ವೀಟ್ ಅನ್ನು ಸಿಎಂ, ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಸುಧಾಕರ್ಗೆ ಟ್ಯಾಗ್ ಮಾಡಿದ್ದಾರೆ.
Advertisement
@drashwathcn @CMofKarnataka @mla_sudhakar #KFIrequestsfulloccupancy pic.twitter.com/S7rxIUlAPM
— Dhruva Sarja (@DhruvaSarja) February 3, 2021
Advertisement
ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿ, ರಾಜ್ಯ ಸರ್ಕಾರಗಳು ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದು ಎಂದು ಸೂಚಿಸಿತ್ತು. ಆದರೆ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಇದರಿಂದ ದೊಡ್ಡ ದೊಡ್ಡ ಸಿನಿಮಾಗಳಿಗೆ ಮತ್ತೆ ನಿರಾಸೆಯಾಗಿದೆ.
ಒಟ್ಟಿನಲ್ಲಿ ಚಿತ್ರಮಂದಿರ ಶೇ.100 ರಷ್ಟು ಭರ್ತಿಗೆ ಕೇಂದ್ರ ಅನುಮತಿ ಕೊಟ್ಟರೂ ರಾಜ್ಯ ಸರ್ಕಾರ ಅಡ್ಡಿಪಡಿಸಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ನಲ್ಲಿ ನಟ ಧೃವ ಸರ್ಜಾ ಅಸಮಾಧಾನ ಹೊರಹಾಕಿದ್ದಾರೆ.