– ಧಾರವಾಡ ಜಿಲ್ಲಾ ವ್ಯಾಪ್ತಿಗೆ 2 ಟ್ಯಾಂಕರ್
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ 14 ದಿನಗಳ ಕಾಲ ಕಠಿಣ ಲಾಕ್ಡೌನ್ ಜಾರಿ ಮಾಡಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು. ಸರ್ಕಾರದ ಮಾರ್ಗದರ್ಶನಗಳನ್ನು ಪಾಲಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡಬಾರದು. ಈ 14 ದಿನಗಳ ಕಾಲ ನಮ್ಮನ್ನು ನಾವು ನಿಯಂತ್ರಿಸಿದರೆ, ವೈರಾಣುವನ್ನು ನಿಯಂತ್ರಿಸಿದಂತೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದ ಸಕ್ರ್ಯೂಟ್ ಹೌಸ್ನಲ್ಲಿ ಲಾಕ್ಡೌನ್ ಹಾಗೂ ಜಿಲ್ಲೆಯ ಆರೋಗ್ಯ ಸ್ಥಿತಿಗಳ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಪ್ರಮಾಣದ ಆಕ್ಸಿಜನ್ ಸರಬಾರಜು ಮಾಡಿ, ಆಕ್ಸಿಜನ್ ಕೊರತೆ ನೀಗಿಸಲು ಪ್ರಯತ್ನಿಸುತ್ತಿವೆ. ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಜೊತೆಯಲ್ಲಿ ಸಂಪರ್ಕದಲ್ಲಿದ್ದು, ಹೆಚ್ಚಿನ ಆಕ್ಸಿಜನ್ ಪಡೆಯಲು ಪ್ರಯತ್ನಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಅಧಿಕಾರಿಗಳನ್ನು ಸಮನ್ವಯಗೊಳಿಸಿ ಆಕ್ಸಿಜನ್ ವಿತರಣೆ ಸರಬರಾಜನ್ನು ಕ್ರಮಬದ್ದ ಗೊಳಿಸಲಾಗುತ್ತಿದೆ ಎಂದರು.
Advertisement
Advertisement
ತಳ್ಳುಗಾಡಿಯಲ್ಲಿ ತರಕಾರಿ, ರೇಷನ್ ಡೋರ್ ಡೆಲವರಿಗೆ ಮನವಿ: ಜನರು ಅಗತ್ಯವಸ್ತಗಳ ಖರೀದಿಗಾಗಿ ಸುಮ್ಮನೆ ಬೀದಿಗೆ ಬರುವುದು ತಪ್ಪಬೇಕಿದೆ. ತಳ್ಳುವ ಗಾಡಿಯಲ್ಲಿ ತರಕಾರಿ ಮಾರಲು ಅವಕಾಶ ಕಲ್ಪಿಸಿಲಾಗಿದೆ. ಕಿರಾಣಿ ಅಂಗಡಿಗಳಿಗೆ ನಿಶ್ಚಿತವಾದ ಗ್ರಾಹರು ಇರುತ್ತಾರೆ. ಅವರಿಂದ ಪೋನ್ ಮೂಲಕ ಆರ್ಡರ್ ಪಡೆದು ಮನೆಗೆ ದಿನಸಿ ಪದಾರ್ಥಗಳನ್ನು ಕಳುಹಿಸಿದರೆ ಅನುಕೂಲವಾಗುತ್ತದೆ. ಗ್ರಾಹರು ಅಗತ್ಯ ವಸ್ತುಗಳು, ಔಷಧಗಳ ನೆಪ ಮಾಡಿಕೊಂಡು ನಗರದಲ್ಲಿ ಓಡಾಟ ಮಾಡಬಾರದು. ಪ್ರತಿ ಏರಿಯಾಗಳಲ್ಲಿ ಕಿರಾಣಿ ಹಾಗೂ ಔಷಧ ಅಂಗಡಿಗಳಿವೆ ಅಲ್ಲಿಯೇ ಖರೀದಿಸಿಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
Advertisement
ಭಾರತ ಸರ್ಕಾರ ಆಕ್ಸಿಜನ್ ಪ್ರಮಾಣವನ್ನು ಹೆಚ್ಚು ಮಾಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. 30 ಟನ್ ಸಾಮಥ್ರ್ಯದ ಆರು ಟ್ಯಾಂಕರ್ಗಳನ್ನು ಕೇಂದ್ರ ಸರ್ಕಾರ ನೀಡಿದೆ. ನಾಳೆಯೆ ಟ್ಯಾಂಕರ್ಗಳು ರಾಜ್ಯಕ್ಕೆ ಆಗಮಿಸಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
Advertisement
ಆಕ್ಸಿಜನ್ ಸರಬರಾಜು ಮಾಡಲು ಅನುಕೂಲವಾಗುವಂತೆ 6 ಟ್ಯಾಂಕರ್ಗಳನ್ನು ರಾಜ್ಯಕ್ಕೆ ನೀಡಲಾಗಿದೆ. ಧಾರವಾಡ ಜಿಲ್ಲೆಯಿಂದ ಬೆಳಗಾವಿ ಹಾಗೂ ಬಿಜಾಪುರ ಜಿಲ್ಲೆಗಳಿಗೆ ಆಕ್ಸಿಜನ್ ಸರಬರಾಜು ಆಗುವುದರಿಂದ 2 ಟ್ಯಾಂಕರ್ಗಳನ್ನು ಜಿಲ್ಲೆಗೆ ನೀಡಲಾಗಿದೆ. ಕೇಂದ್ರ ಸರ್ಕಾರ 150 ಆಕ್ಸಿಜನ ಘಟಕಗಳನ್ನು ಕರ್ನಾಟಕಕ್ಕೆ ಮಂಜೂರು ಮಾಡಿದೆ. 1,500 ಆಕ್ಸಿಜನ್ ಸಾಂದ್ರಕಗಳನ್ನು ನೀಡಲಾಗಿದೆ. ಸರ್ವರಿಗೂ ಬಡವ ಬಲ್ಲಿದ ಎಂಬ ಬೇಧವಿಲ್ಲದೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಯ್ಯುಷ್ಮಾನ್ ಭಾರತ ಸ್ಕೀಂ ನಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಾರಿ ಕೋವಿಡ್ ಅಲೆ ಅನಿರೀಕ್ಷಿತವಾದದ್ದು, ಯಾರು ಊಹಿಸದ ರೀತಿಯಲ್ಲಿ ಇದರ ಪರಿಣಾಮವಾಗುತ್ತಿದೆ. ಇದರ ಸರಪಳಿಯನ್ನು ಮುರಿಯಬೇಕಾಗಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಪೊಲೀಸರು ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಸಹ ನಮ್ಮನಿಮ್ಮಂತೆ ಮನುಷ್ಯರು. ಅನಗತ್ಯವಾಗಿ ಪೊಲೀಸರ ಕಣ್ಣು ತಪ್ಪಿಸಿ ಓಡಾವುದು ಮಾಡಬೇಡಿ. ನಾವೆಲ್ಲರು ಬದುಕಿದ್ದರೆ ಮುಂದಿನ ಸಂಗತಿಗಳನ್ನು ಅಚ್ಚುಕಟ್ಟಾಗಿ ಮಾಡಬಹುದು. ಈ ಅಲೆ ಸರಪಳಿ ಮುರಿದರೆ ಕೋವಿಡ್ ನಿಯಂತ್ರಣಕ್ಕೆ ತರಬಹುದು ಎನ್ನುವುದು ತಜ್ಞರ ಅಭಿಪ್ರಾಯ. ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ಬೆಡ್ ಕೊರತೆ ಆಗದಂತೆ ಪ್ರತಿದಿನ ಮೇಲು ಉಸ್ತಾವಾರಿಯನ್ನು ನೋಡಿಕೊಳ್ಳಲಾಗುತ್ತಿದೆ. ಎಚ್ಚರದಿಂದ ಇರಿ ಮೈ ಮರಿಯಬೇಡಿ. ಸಾರ್ವಜನಿಕರ ರಕ್ಷಣೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಸದಾ ಸಿದ್ಧವಿದೆ ಎಂದು ನುಡಿದಿದ್ದಾರೆ.
ಮನೆಗಳಿಗೆ ತೆರಳಿ 50 ಸಾವಿರ ಕೋವಿಡ್ ಔಷಧ ಕಿಟ್ ವಿತರಣೆ: ಧಾರವಾಡ ಜಿಲ್ಲೆಯಲ್ಲಿ 25 ರಿಂದ 50 ಸಾವಿರ ಕೋವಿಡ್ ಔಷದ ಕಿಟ್ ಗಳನ್ನು ತಯಾರಿಸಿ ಮನೆಗಳಿಗೆ ತೆರಳಿ ಹಂಚಲು ತಯಾರಿ ನಡೆಸಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಔಷಧ ಉಗ್ರಾಣದಿಂದ ಅಗತ್ಯ ಇರುವ ವೈಟಮಿನ್ ಹಾಗೂ ಜಿಂಕ್ ಸೇರಿದಂತೆ ಇತರೆ ಔಷಧಗಳನ್ನು ಪಡೆಯಲು ಇಂಡೆಂಟ್ ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ನಿಯಮಗಳನ್ನು ಉಲಂಘಿಸುವವರ ಮೇಲೆ ಕಠಿಣ ಕ್ರಮ: ಪೋಲಿಸ್ ಆಯುಕ್ತ ಲಾಭುರಾಮ್ ಮಾತನಾಡಿ ಅವಳಿ ನಗರದಲ್ಲಿ ಸರ್ಕಾರದ ನಿಯಮಾನುಸಾರ ಚೆಕ್ ಪೋಸ್ಟ್ಗಳನ್ನು ಹಾಕಿ ತಪಾಸಣೆ ನಡೆಸಲಾಗುತ್ತಿದೆ. ನಿಯಮಗಳನ್ನು ಉಲಂಘಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಕಳೆದ ಮೂರು ದಿನಗಳಲ್ಲಿ ಅವಳಿ ನಗರದಲ್ಲಿ ಸಾವಿರಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಲಾಗಿದೆ. ಪ್ರಮುಖ ಏರಿಯಾಗಳಲ್ಲಿ ರಸ್ತೆಗಳನ್ನು ಬ್ಯಾರಿಕೇಡ್ ಗಳಿಂದ ಬ್ಲಾಕ್ ಮಾಡಿ ಜನ ಸಂಚಾರವನ್ನು ನಿಯಂತ್ರಿಸಲಾಗುವುದು. ಕೋವಿಡ್ ತುರ್ತು ಪರಿಸ್ಥಿತಿ ಹೊರತು ಪಡಿಸಿ ಯಾವುದೇ ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ ಎಂದರು.
ಸಭೆಯಲ್ಲಿ ಶಾಕರುಗಳಾದ ಪ್ರಸಾದ್ ಅಬ್ಬಯ್ಯ, ಅರವಿಂದ ಬೆಲ್ಲದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಧಾರವಾಡ ಪೊಲೀಸ್ ವರಿಷಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯಶವಂತ ಮದೀನಕರ ಹುಬ್ಬಳ್ಳಿ ತಹಶೀಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.