ಬೆಂಗಳೂರು: ಎರಡು ದಿನಗಳ ಕಾರ್ಯಕ್ರಮ ಮೇರೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆತ್ಮೀಯವಾಗಿ ಬರಮಾಡಿಕೊಂಡರು.
ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು, ಈ ವೇಳೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಹಾಗೂ ಸಿ.ಟಿ ರವಿ ಮತ್ತಿತರು ಸಿಎಂಗೆ ಸಾಥ್ ನಿಡಿದರು.
Advertisement
Advertisement
ಎಚ್ಎಎಲ್ ಏರ್ ಪೋರ್ಟ್ ನಿಂದ ಶಾ ಅವರು ಮಧ್ಯಾಹ್ನದ ಊಟ ಮುಗಿಸಿ ಹೆಲಿಕಾಪ್ಟರ್ ನಲ್ಲಿ ಭದ್ರಾವತಿಗೆ ತೆರಳಿದ್ದಾರೆ. ಅಮಿತ್ ಷಾ ಜೊತೆ ವಿಶೇಷ ವಿಮಾನದಲ್ಲಿ ಸಿಎಂ, ಕೇಂದ್ರ ಸಚಿವರಾದ ಸದಾನಂದಗೌಡ ಹಾಗೂ ಪ್ರಹ್ಲಾದ್ ಜೋಷಿ ಕೂಡ ಭದ್ರಾವತಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ.
Advertisement
Advertisement
ಇಂದು ಸಂಜೆ 5 ಗಂಟೆಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ವರ್ಚುವಲ್ ಮೂಲಕ ಪೊಲೀಸ್ ವಸತಿಗೃಹ ಉದ್ಘಾಟನೆ ಮಾಡಲಿದ್ದಾರೆ. ನಂತರ ವಿಜಾಪುರ ಐಆರ್ಬಿ ಸೆಂಟರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಜೆ 6:15 ರಿಂದ 6.30 ರವರೆಗೆ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವರು ಉಪಸ್ಥಿತರಿರಲಿದ್ದಾರೆ.
#WelcomeAmitShahJi
ಎರಡು ದಿನಗಳ ಕಾರ್ಯಕ್ರಮ ಮೇರೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ ಶ್ರೀ @AmitShah ಅವರನ್ನು ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.@BSYBJP @JoshiPralhad @nalinkateel @CTRavi_BJP @BJP4India @BJP4Karnataka pic.twitter.com/JfiEv1u2Ly
— Sadananda Gowda (@DVSadanandGowda) January 16, 2021
ಸಂಜೆ 6:30 ಕ್ಕೆ ಸಮಿತಿ ಕೊಠಡಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ (ಎಡಿಜಿಪಿ ರ್ಯಾಂಕ್ ಮೇಲ್ಪಟ್ಟ ಅಧಿಕಾರಿಗಳು) ನಡೆಸಲಿದ್ದು, 7:30 ಕ್ಕೆ ವಿಧಾನಸೌಧದಿಂದ ವಿಂಡ್ಸರ್ ಮ್ಯಾನರ್ ಹೋಟೆಲ್ ಗೆ ಶಾ ತೆರಳಲಿದ್ದಾರೆ. ಅಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಿ ಬಳಿಕ ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.