ಬೆಂಗಳೂರು: ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
During his two-day visit to New Delhi, Chief Minister @BSBommai met Union Health & Family Welfare and Chemicals & Fertilizers Minister Shri @mansukhmandviya today and discussed about various aspects of Covid management including supply of vaccines & essential drugs.@MoHFW_INDIA pic.twitter.com/05UbaKCoKu
— CM of Karnataka (@CMofKarnataka) July 31, 2021
Advertisement
ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯಕ್ಕೆ 1.5 ಕೋಟಿ ಲಸಿಕೆ ಪೂರೈಸಲು ಕೋರಿಕೆ ಸಲ್ಲಿಸಿದ್ದು, 1 ಕೋಟಿ ಲಸಿಕೆ ಪೂರೈಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ಇದರಿಂದ ರಾಜ್ಯದಲ್ಲಿ ಪ್ರತಿದಿನ 2 ರಿಂದ 3 ಲಕ್ಷ ಲಸಿಕೆ ಒದಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
Advertisement
'ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಗಳ ಹಿನ್ನಲೆಯಲ್ಲಿ, ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಆದ್ಯತೆ ಮೇರೆಗೆ ರಕ್ಷಣೆ, ಪರಿಹಾರ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಸಂತ್ರಸ್ತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು' : ಮುಖ್ಯಮಂತ್ರಿ @BSBommai. pic.twitter.com/o8TF96OLxf
— CM of Karnataka (@CMofKarnataka) July 31, 2021
Advertisement
ಕೋವಿಡ್ 3 ನೇ ಅಲೆ ನಿಯಂತ್ರಣ, ಲಸಿಕೆ ಅಭಿಯಾನ ಹಾಗೂ ನೆರೆರಾಜ್ಯವಾದ ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಂದಾಗಿ ರಾಜ್ಯದ ಸರಹದ್ದು ಪ್ರವೇಶ ನಿಯಂತ್ರಿಸುವ ಕುರಿತು ಮಾರ್ಗಸೂಚಿ ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ವಿವರಿಸಿದರು.