ಬೆಂಗಳೂರು: ರಾಜ್ಯದಲ್ಲಿ 1,990 ಜನಕ್ಕೆ ಇವತ್ತು ಕೊರೊನಾ ಸೋಂಕು ತಗುಲಿದ್ದು, 45 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 33,642 ಸಕ್ರಿಯ ಪ್ರಕರಣಗಳಿವೆ.
Advertisement
ಇವತ್ತು 2,537 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.59 ಮತ್ತು ಮರಣ ಪ್ರಮಾಣ ಶೇ.2.26ರಷ್ಟಿದೆ. ರಾಜ್ಯದಲ್ಲಿ ಇದುವರೆಗೂ 28,76,587 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 35,989 ಜನರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 1,24,494 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
Advertisement
ಬೆಂಗಳೂರಿನಲ್ಲಿಂದು 400 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಇಂದು ಸಹ ದಕ್ಷಿಣ ಕನ್ನಡ, ಹಾಸನ, ಬೆಳಗಾವಿ, ಮೈಸೂರು ಮತ್ತು ಉಡುಪಿಯಲ್ಲಿ ಕೊರೊನಾ ಸಂಖ್ಯೆ ಮೂರಂಕಿಯಲ್ಲಿದೆ. ಯಾದಗಿರಿಯಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.
Advertisement
ಯಾವ ಜಿಲ್ಲೆಯಲ್ಲಿ ಎಷ್ಟು?:
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 4, ಬಳ್ಳಾರಿ 16, ಬೆಳಗಾವಿ 140, ಬೆಂಗಳೂರು ಗ್ರಾಮಾಂತರ 40, ಬೆಂಗಳೂರು ನಗರ 400, ಬೀದರ್ 2, ಚಾಮರಾಜನಗರ 41, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 94, ಚಿತ್ರದುರ್ಗ 4, ದಕ್ಷಿಣ ಕನ್ನಡ 219, ದಾವಣಗೆರೆ 20, ಧಾರವಾಡ 18, ಗದಗ 7, ಹಾಸನ 175, ಹಾವೇರಿ 10, ಕಲಬುರಗಿ 14, ಕೊಡಗು 42, ಕೋಲಾರ 40, ಕೊಪ್ಪಳ 10, ಮಂಡ್ಯ 69, ಮೈಸೂರು 211, ರಾಯಚೂರು 2, ರಾಮನಗರ 17, ಶಿವಮೊಗ್ಗ 99, ತುಮಕೂರು 78, ಉಡುಪಿ 120, ಉತ್ತರ ಕನ್ನಡ 7, ವಿಜಯಪುರ ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.