ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲೂ ಮುಂದಿನ ಎರಡು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜೂನ್ 30 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 28 ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಭಾರೀ ಮಳೆ – ಎಲ್ಲೆಡೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ
Advertisement
Advertisement
ಕರಾವಳಿ ಜಿಲ್ಲೆಗಳಲ್ಲಿ ಜೂನ್ 27 ರಿಂದ ಜುಲೈ 1 ತನಕ, ಉತ್ತರ ಒಳ ನಾಡಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆ ಆಗಲಿದೆ. ಬೀದರ್, ಯಾದಗಿರಿ, ಕಲಬುರಗಿ, ರಾಯಚೂರು ಭಾಗಗಳು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಕೂಡ ಮುಂದಿನ ನಾಲ್ಕು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
Advertisement