– ಕೊಡಗಿನಲ್ಲಿ ಅತ್ಯಧಿಕ ಪ್ರಮಾಣ
– ದಕ್ಷಿಣ ಕನ್ನಡದಲ್ಲಿ ಅತೀ ಕಡಿಮೆ ಪ್ರಮಾಣ
ಬೆಂಗಳೂರು: ಮಾನವಕುಲವನ್ನೇ ವರ್ಷಗಳ ಕಾಲ ದಿನಂಪ್ರತಿ ಕಾಡಿದ್ದ, ಕಾಡುತ್ತಿರುವ `ಚೀನಿ ವೈರಸ್’ ಕೊರೊನಾಗೆ ಸಂಜೀವಿನಿ ಸಿಕ್ಕಾಗಿದೆ. ವಿಶ್ವದ ಅತಿದೊಡ್ಡ ಲಸಿಕೆ ಹಂಚಿಕೆ ಮಹಾಯಜ್ಞದ ಮೊದಲ ದಿನವಾದ ಇಂದೇ ದೇಶಾದ್ಯಂತ ವ್ಯಾಕ್ಸಿನ್ ಹಬ್ಬದ ವಾತಾವರಣ ಮನೆ ಮಾಡಿದೆ.
Advertisement
ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62ರಷ್ಟು ಮಂದಿ ಸ್ವಯಂಪ್ರೇರಿತರಾಗಿ ಲಸಿಕೆ ಪಡೆದಿದ್ದಾರೆ. ಮೊದಲ ದಿನ 21,658 ಮಂದಿಗೆ ಲಸಿಕೆ ನೀಡಬೇಕೆಂದು ನಿಗದಿಯಾಗಿತ್ತು. ಈ ಪೈಕಿ 13,408 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಯಾರಿಗೂ ಗಂಭೀರ ಸಮಸ್ಯೆ, ಅಡ್ಡ ಪರಿಣಾಮ ಕಂಡುಬಂದಿಲ್ಲ. ಚುಚ್ಚುಮದ್ದು ನೀಡಿದಾಗ ಕೆಲವರಿಗೆ ಊತ ಬಂದಿರಬಹುದು. ಆದರೆ ಅದು ಕೇವಲ ಅರ್ಧಗಂಟೆಯಲ್ಲಿ ಕಡಿಮೆಯಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Advertisement
ಕೆ.ಆರ್.ಪುರಂ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಕೊರೊನಾ ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ರಾಜ್ಯದೆಲ್ಲೆಡೆ ಲಸಿಕಾ ಅಭಿಯಾನ ಸುಗಮವಾಗಿ ನಡೆಯುತ್ತಿದ್ದು, ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆಗಳು.#LargestVaccineDrive pic.twitter.com/oRVfEnKwEn
— Dr Sudhakar K (@mla_sudhakar) January 16, 2021
Advertisement
ಸೋಮವಾರದಿಂದ ಮತ್ತೆ ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಭಾನುವಾರ ಹೆಚ್ಚಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಾನಾ ಭಾಗಗಳಲ್ಲಿ ಸಂಚರಿಸಿ ಲಸಿಕೆ ಪಡೆಯುವಂತೆ ಉತ್ತೇಜಿಸಲಿದ್ದೇನೆ ಎಂದು ಡಾ.ಸುಧಾಕರ್ ಮಾಹಿತಿ ನೀಡಿದರು.
Advertisement
Visited the Covid-19 vaccination centre at St.John Hospital in Bengaluru.
ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕೊರೊನಾ ಲಸಿಕಾ ವಿತರಣಾ ಕೇಂದ್ರವನ್ನು ಪರಿವೀಕ್ಷಿಸಲಾಯಿತು.#LargestVaccineDrive pic.twitter.com/SByffja5NX
— Dr Sudhakar K (@mla_sudhakar) January 16, 2021
ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಶೇ.84 ಮಂದಿ ಲಸಿಕೆ ಪಡೆದಿದ್ದಾರೆ. ಉತ್ತರ ಕನ್ನಡದಲ್ಲಿ ಶೇ.80 ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಅಂದರೆ ಶೇ.37 ಮಂದಿ ಲಸಿಕೆ ಪಡೆದಿದ್ದಾರೆ. ಈ ಜಿಲ್ಲೆಯಲ್ಲಿ 660 ಮಂದಿಗೆ ಲಸಿಕೆ ನೀಡುವ ಗುರಿ ಇದ್ದು, 223 ಮಂದಿ ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದು ವಿದ್ಯಾವಂತರ ಜಿಲ್ಲೆಯಾಗಿದ್ದು, ಹೆಚ್ಚಿನವರು ಲಸಿಕೆ ಪಡೆಯಬೇಕು ಎಂದು ಕೋರಿದರು.
ಬೆಂಗಳೂರು ನಗರದಲ್ಲಿ ಶೇ.53 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.65 ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಳ್ಳಲಾಗಿದೆ. ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಡಿಮೆ ಪ್ರಮಾಣದಲ್ಲಿ ಶೇ.28 ಆಗಿದೆ ಎಂದು ತಿಳಿಸಿದರು. ಮೊದಲ ದಿನ ಲಸಿಕೆ ಪಡೆಯದವರು ಮುಂದಿನ ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆ.
ದೇಶಾದ್ಯಂತ ಇಂದಿನಿಂದ ಕೊರೊನಾ ಲಸಿಕೆ ಅಭಿಯಾನ ಆರಂಭವಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರುಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ರಾಜ್ಯದಲ್ಲಿ ಲಸಿಕೆ ವಿತರಣೆಯ ಮೊದಲನೇ ದಿನದ ವಿದ್ಯಮಾನಗಳು ಮತ್ತು ಪ್ರಗತಿ ಕುರಿತು ಕೇಂದ್ರ ಸಚಿವರಿಗೆ ವಿವರಿಸಲಾಯಿತು.@drharshvardhan @DHFWKA pic.twitter.com/3Ud4SOWZ5P
— Dr Sudhakar K (@mla_sudhakar) January 16, 2021
ರಾಜ್ಯದಲ್ಲಿ ಒಟ್ಟು 7.43 ಲಕ್ಷ ಮಂದಿಯನ್ನು ಗುರುತಿಸಿದ್ದು, 8 ಲಕ್ಷ ಲಸಿಕೆ ಬಂದಿದೆ. ಇನ್ನೂ 8 ಲಕ್ಷ ಲಸಿಕೆ ಕಳುಹಿಸಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಪೌರಕಾರ್ಮಿಕರೊಬ್ಬರಿಗೆ ಮೊದಲ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆ ಪ್ರತಿಪಕ್ಷಗಳಿಗೆ ಅರ್ಥವಾಗಿಲ್ಲ. ಆದರೆ ಸಾಮಾನ್ಯ ಜನರಿಗೆ ಅರ್ಥವಾಗಿದೆ ಎಂದರು.