ಮಂಡ್ಯ: ರಾಜ್ಯದಲ್ಲೇ ಅತೀ ಹೆಚ್ಚು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ನಿಯಮಬದ್ಧವಾಗಿ ನಡೆಸಿದ ಏಕೈಕ ಸಂಸದೆ ಎಂಬ ಹೆಗ್ಗಳಿಕೆಗೆ ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಅವರು ಪಾತ್ರರಾಗಿದ್ದಾರೆ.
ಪ್ರತಿ ಸಂಸದರು ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕಕ್ಕೆ ಒಂದು ದಿಶಾ ಸಭೆಯಂತೆ ವರ್ಷಕ್ಕೆ ವರ್ಷಕ್ಕೆ ನಾಲ್ಕು ಸಭೆಗಳನ್ನು ಮಾಡಬೇಕೆಂಬ ನಿಯಮ ಇದೆ. ಆದರೆ ರಾಜ್ಯದ ಕೆಲ ಸಂಸದರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ 2 ಸಭೆಗಳನ್ನು ನಡೆಸಿದ್ದರೆ, ಇನ್ನೂ ಕೆಲ ಸಂಸದರು ಕೇವಲ ಒಂದು ಸಭೆಯನ್ನು ಮಾತ್ರ ಮಾಡಿದ್ದಾರೆ. ಆದರೆ ಮಂಡ್ಯ ಲೋಕಸಭಾ ಸದಸ್ಯ ಸುಮಲತಾ ಅಂಬರೀಶ್ ಅವರು 2020-21ನೇ ಸಾಲಿನಲ್ಲಿ ನಾಲ್ಕು ಸಭೆಗಳನ್ನು ಮಾಡುವ ಮೂಲಕ ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ದಿಶಾ ಸಭೆಗಳನ್ನು ಮಾಡಿದ ಮೊದಲ ಸಂಸದೆ ಎಂದು ಭಾರತ ಸರ್ಕಾರದ ವೆಬ್ಸೈಟ್ನಲ್ಲಿ ದಾಖಲಾಗಿದೆ.
Advertisement
Advertisement
ಸುಮಲತಾ ಅಂಬರೀಶ್ ಅವರು ಕಳೆದ ನಾಲ್ಕು ದಿಶಾ ಸಭೆಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಇತರ ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಇದಲ್ಲದೇ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳುತ್ತಿದ್ದಾರೆ.