-ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ
ಬೆಂಗಳೂರು: ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಸಚಿವ ಡಾ.ಕೆ ಸುಧಾಕರ್ ಅವರಿಗೆ ಟಾಂಗ್ ನೀಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಸದ್ಯ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ ಸಮರಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಎಚ್ಡಿಕೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ ಎಂದು ಬರೆದುಕೊಂಡಿದ್ದಾರೆ.
Advertisement
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ.
1/7
— H D Kumaraswamy (@hd_kumaraswamy) August 31, 2020
Advertisement
ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ. ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದಿದ್ದಾರೆ.
Advertisement
ಅಲ್ಲದೇ ಸಚಿವ ಸ್ಥಾನ ಸಿಕ್ಕಿದೆ ಎಂಬ ಉತ್ಸಾಹದಲ್ಲಿ ನನ್ನ ಹಿನ್ನೆಲೆ-ಮುನ್ನೆಲೆ ಬಗೆಗೆ ಮಾತನಾಡುವುದು ಸುಧಾಕರ್ ಅವರ ನೈಜ ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಅಧಿಕಾರ ಶಾಶ್ವತ ಮತ್ತು ತಮ್ಮ ಸ್ವಂತ ಶಕ್ತಿ ಎಂಬ ಭ್ರಮೆಯಲ್ಲಿ ಇರುವವರು ಮಾತ್ರ ಹೀಗೆ ಮಾತನಾಡುತ್ತಾರೆ ಎಂಬುದು ನನ್ನ ಗ್ರಹಿಕೆ.
Advertisement
ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ. ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚನೆಗೊಂಡ ಸರ್ಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ ಸಚಿವ ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದು ಹೇಳಿದ್ದಾರೆ.
ಎಚ್ಡಿಕೆ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾ ಹಣ ಬಳಸಲಾಗಿದೆ ಎಂದು ಎಚ್ಡಿಕೆ ಆರೋಪ ಮಾಡಿದ್ದರು. ಈ ಆರೋಪಕ್ಕೆ ತಿರುಗೇಟು ನೀಡಿದ್ದ ಸುಧಾಖರ್, ಬಿಜೆಪಿ ಎಂದಿಗೂ ನೀಚ ಕೆಲಸಕ್ಕೆ ಕೈಹಾಕುವುದಿಲ್ಲ. ಕುಮಾರಸ್ವಾಮಿ ತಮ್ಮ ಮಾತಿನ ಮೇಲೆ ನಿಗಾಯಿಟ್ಟು ಮಾತನಾಡಬೇಕು ಎಂದಿದ್ದರು.