ರಾಯಚೂರು: ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡವಾಗುವ ಮೂಲಕ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 378ಕ್ಕೆ ಏರಿದೆ.
ನಗರದ ಇಬ್ಬರು ವೈದ್ಯಕೀಯ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯ ಒಟ್ಟು 8 ಜನ ವೈದ್ಯಕೀಯ ಸಿಬ್ಬಂದಿ, ನಾಲ್ಕು ಜನ ಪೊಲೀಸರಿಗೆ ಸೋಂಕು ತಗುಲಿದಂತಾಗಿದೆ. ಜಿಲ್ಲೆಯಲ್ಲಿ ಈ ವರೆಗೆ 82 ಜನ ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 294 ಪ್ರಕರಣಗಳು ಸಕ್ರಿಯವಾಗಿವೆ.
Advertisement
Advertisement
ರಾಯಚೂರಿನ ಕೋವಿಡ್ ಆಸ್ಪತ್ರೆ ಓಪೆಕ್ನಲ್ಲಿ ಸೋಂಕಿತರು ಮತ್ತು ವೈದ್ಯಕೀಯ ಸಿಬ್ಬಂದಿ ಮಧ್ಯೆ ವಾಗ್ವಾದ ಪದೇ ಪದೇ ನಡೆಯುತ್ತಲೇ ಇದೆ. ಸೂಕ್ತ ಚಿಕಿತ್ಸೆ ಸಿಗದ್ದಕ್ಕೆ ಕೊರೊನಾ ಸೋಂಕಿತರು ವಾಗ್ವಾದಕ್ಕೆ ಇಳಿದಿದ್ದಾರೆ. ಸೂಕ್ತ ವ್ಯವಸ್ಥೆ ಮಾಡುವಂತೆ ಗಲಾಟೆ ಮಾಡಿದ್ದಾರೆ. ಅಲ್ಲದೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಆಸ್ಪತ್ರೆ ಗೇಟ್ ಬಂದ್ ಮಾಡಿ ಹೊರಗಡೆ ಪೊಲೀಸರು ಕಾವಲಿಗೆ ನಿಂತರೂ ಸೋಂಕಿತರು ಹೊರಬರುವ ಪ್ರಯತ್ನ ಮಾಡಿದ್ದಾರೆ.
Advertisement
Advertisement
ಪೊಲೀಸರು ಸೂಚನೆ ನೀಡಿದರೂ ಸೋಂಕಿತರು ಗುಂಪು ಗುಂಪಾಗಿ ಸೇರಿ ಗಲಾಟೆ ಮಾಡಿ ಅಧಿಕಾರಿಗಳು, ವೈದ್ಯರು, ವೈದ್ಯಕೀಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಆಸ್ಪತ್ರೆಯಲ್ಲಿ ರಾದ್ಧಾಂತ ಮಾಡಿದ್ದಾರೆ. ಇವರನ್ನು ನಿಭಾಯಿಸುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದೆ.