ರಾಯಚೂರು: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಟ್ಟು 31 ಪ್ರಕರಣಗಳು ಈಗಾಗಲೇ ದಾಖಲಾಗಿದ್ದು, ಇದುವರೆಗೆ ನಾಲ್ಕು ಜನ ಸೋಂಕಿತರು ಬ್ಲ್ಯಾಕ್ ಫಂಗಸ್ಗೆ ಬಲಿಯಾಗಿದ್ದಾರೆ.
Advertisement
ಜಿಲ್ಲೆಯಲ್ಲಿ ದಾಖಲಾಗಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಪೈಕಿ, ಖಾಸಗಿ ಆಸ್ಪತ್ರೆಗಳಲ್ಲಿ ಪತ್ತೆಯಾದ ಪ್ರಕರಣಗಳು ಹಾಗೂ ಸಾವಿನ ಲೆಕ್ಕವನ್ನು ಜಿಲ್ಲಾಡಳಿತ ಪ್ರಕಟಿಸಿಲ್ಲ. ಸದ್ಯ 23 ಜನ ಸೋಂಕಿತರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಇದನ್ನೂ ಓದಿ, ರಾಯಚೂರಿನ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ- ಆರೈಕೆ ಕೇಂದ್ರಕ್ಕೆ ಬರಲೊಪ್ಪದ ಜನ
Advertisement
Advertisement
ರಿಮ್ಸ್ ಆಸ್ಪತ್ರೆಯಿಂದ ಚಿಕಿತ್ಸೆಗಾಗಿ ಬೇರೆಡೆಗೆ 4 ಜನ ಸೋಂಕಿತರು ಹೋಗಿದ್ದಾರೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ನ್ನು ಈಗಾಗಲೇ ಆರಂಭ ಮಾಡಲಾಗಿದೆ. 28 ಹಾಸಿಗೆಯ ವಾರ್ಡ್ ನಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ. 11 ಜನ ನುರಿತ ಇ.ಎನ್.ಟಿ ವೈದ್ಯರ ತಂಡ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದೆ. ಇದುವರೆಗೆ ಇಬ್ಬರೂ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
Advertisement