– ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ಖರೀದಿ
– ಕೊನೆಗೂ ಭತ್ತ ಖರೀದಿ ಕೇಂದ್ರ ಆರಂಭ
ಯಾದಗಿರಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಭತ್ತವನ್ನು ಖರೀದಿಸಲು ತೀರ್ಮಾನಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಆರ್ ಹೇಳಿದ್ದಾರೆ.
Advertisement
ರೈತರು ಕೃಷಿ ಇಲಾಖೆಯಲ್ಲಿ ಫೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಬಳಿಕ ಖರೀದಿ ಕೇಂದ್ರಗಳಲ್ಲಿ ಭತ್ತ ಮಾರಾಟ ಮಾಡುವ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ರೈತರು ಭತ್ತವನ್ನು ನಿಗದಿಪಡಿಸಿರುವ ಅಕ್ಕಿ ಗಿರಣಿಗಳಿಗೆ, ಖರೀದಿ ಕೇಂದ್ರಗಳಿಗೆ ನೇರವಾಗಿ ಸರಬರಾಜು ಮಾಡಬಹುದು ಎಂದು ಹೇಳಿದರು.
Advertisement
Advertisement
ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್ಗೆ 1,868 ರೂ. ಗ್ರೇಡ್ ಎ ಭತ್ತಕ್ಕೆ 1,888 ರೂ.ಗಳ ದರವನ್ನು ಸರ್ಕಾರ ನಿಗದಿಪಡಿಸಿದೆ. ಜಿಲ್ಲೆಯಲ್ಲಿ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ಭತ್ತ ಖರೀದಿಯ ಅಧಿಕೃತ ಏಜೆನ್ಸಿಯಾಗಿದ್ದು, ರೈತರು ಡಿಸೆಂಬರ್30 ರವರೆಗೆ ಭತ್ತ ಮಾರಾಟ ಮಾಡಲು ಹೆಸರು ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು.
Advertisement
ಕೋವಿಡ್-19 ಎರಡನೆ ಅಲೆ ಹರಡುವಿಕೆ ಹಿನ್ನೆಲೆಯಲ್ಲಿ ರೈತರು ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.