ಶಿವಮೊಗ್ಗ: ಕೊರೊನಾ ರೋಗವನ್ನು ಹಿಮ್ಮೆಟ್ಟಿಸಲು ಅವಶ್ಯಕವಾಗಿರುವ ಕೋವಿಡ್ ಲಸಿಕೆಯನ್ನು ದೊರಕಿಸುವ ಲಸಿಕಾ ಅಭಿಯಾನವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜ್ಯವನ್ನು ಕೊರೊನಾ ಮುಕ್ತಗೊಳಿಸಲು ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
Advertisement
ಜಿಲ್ಲಾ ಪಂಚಾಯತ್ ಸಭಾಂಣದಲ್ಲಿ ಧ್ವನಿ ಫೌಂಡೇಶನ್ ಬೆಂಗಳೂರು, ಜಿಲ್ಲಾ ಪಂಚಾಯತ್ ಹಾಗೂ ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ಕೋವಿಡ್ ಜಿಲ್ಲಾ ನೋಡಲ್ ಏಜೆನ್ಸಿ ಇವರ ಸಹಯೋಗದಲ್ಲಿ ಕೋವಿಡ್ ಲಸಿಕೆ ಮಹತ್ವ ಮತ್ತು ಅದರ ಉಪಯೋಗ ಕುರಿತು ಎಲ್ಲರಿಗೂ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ತಯಾರಿಸಲಾಗಿರುವ ಲಸಿಕೆ ಮೂಲಕ ಕೋವಿಡ್ 19ನ್ನು ನಿಯಂತ್ರಿಸಲು ಮಾರ್ಗದರ್ಶಿಕೆಯನ್ನು ಅನಾವರಣಗೊಳಿಸಿದ್ದಾರೆ. ಇದನ್ನೂ ಓದಿ: ಕೆಲಸದ ಒತ್ತಡದಿಂದಾಗಿ ವ್ಯಕ್ತಿಗೆ ಖಾಲಿ ಸಿರಿಂಜ್ ಚುಚ್ಚಿದ ನರ್ಸ್..!
Advertisement
Advertisement
ರಾಜ್ಯ ಸರಕಾರ ಈಗಾಗಲೇ ತುಂಬ ವ್ಯವಸ್ಥಿತವಾಗಿ ಎಲ್ಲರಿಗೂ ಲಸಿಕೆ ದೊರಕಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಜೂನ್ 21ರಂದು ಸುಮಾರು 11 ಲಕ್ಷ ಜನರಿಗೆ ಒಂದೇ ದಿನ ಲಸಿಕೆ ಹಾಕುವ ಮೂಲಕ ದೊಡ್ಡ ಸಾಧನೆಯನ್ನೇ ಮಾಡಲಾಗಿದೆ. ಹೀಗೆ ಇಡೀ ರಾಜ್ಯದ ಜನತೆಗೆ ಲಸಿಕೆ ದೊರಕಬೇಕು ಹಾಗೂ ರಾಜ್ಯ ಕೊರೊನಾ ಮುಕ್ತವಾಗಬೇಕು ಎಂಬ ಸದುದ್ದೇಶದಿಂದ ಮಾರ್ಗದರ್ಶಿಕೆಯನ್ನು ಇಂದು ಲೋಕಾರ್ಪಣೆ ಮಾಡಿದ್ದೇನೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಮಾರ್ಗದರ್ಶಿಕೆಯನ್ನು ಗ್ರಾಮ ಪಂಚಾಯ್ತಿ ಮೂಲಕ ಜನರಿಗೆ ತಲುಪಿಸಬೇಕು ಎಂದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಪ್ರಯತ್ನಿದರೆ ತಪ್ಪೇನು, ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ : ಈಶ್ವರಪ್ಪ
Advertisement
ಆರಂಭದಲ್ಲಿ ಲಸಿಕೆ ಬಗ್ಗೆ ಹಲವರಲ್ಲಿ ತಪ್ಪು ಕಲ್ಪನೆ ಇತ್ತು. ಈಗಲೂ ಕೆಲವರಲ್ಲಿ ಇದೆ. ಅದನ್ನು ಹೋಗಲಾಡಿಸುವ ಪ್ರಯತ್ನ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಮಾಡುತ್ತಿದೆ. ಜೊತೆಗೆ ಇತ್ತೀಚೆಗೆ ಲಸಿಕೆ ಬಗ್ಗೆ ಜಾಗೃತಿ ಕೂಡ ಹೆಚ್ಚಾಗಿದೆ. ಲಸಿಕೆ ಬೇಡಿಕೆ ಹೆಚ್ಚಿದೆ. ನಮ್ಮ ಪ್ರಧಾನಿಯವರು ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ಪಣ ತೊಟ್ಟಿದ್ದಾರೆ. ಲಸಿಕೆಯನ್ನೂ ಪೂರೈಸುತ್ತಿದ್ದಾರೆ ಎಂದು ಹೇಳಿದರು.
ಕೊರೊನಾ ನಿಯಂತ್ರಣ ಕುರಿತು ಜನಜಾಗೃತಿ ಮತ್ತು ಎರಡನೇ ಅಲೆ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರ, ವಿವಿಧ ಇಲಾಖೆಗಳು ಗ್ರಾಮೀಣ ಭಾಗದಲ್ಲಿ ವಿಶೇಷವಾಗಿ ಗ್ರಾಮೀಣಾಭಿವೃದ್ದಿ ಇಲಾಖೆಯ ಸೇವೆಯನ್ನು ಮರೆಯುವಂತಿಲ್ಲ. ರಾಜ್ಯ, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮೀಣ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಎನ್ಜಿಓಗಳು ಜನ ಜಾಗೃತಿಗೊಳಿಸುವಲ್ಲಿ ಮಾಡುತ್ತಿರುವ ಕೆಲಸ ಅತ್ಯುತ್ತಮವಾಗಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ವ್ಯಾಕ್ಸಿನ್ ಕೊರತೆ- NO STOCK ಫಲಕ ಹಾಕಿದ ಆಸ್ಪತ್ರೆಗಳು
ಗ್ರಾಮ ಮಟ್ಟದಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಅಭಿಯಾನದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಮಾರ್ಗದರ್ಶಿಯನ್ನು ಹೊರತಂದಿದ್ದು, ಇದರಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ಗ್ರಾ.ಪಂ ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸ್ವಯಂ ಸೇವಕರ ಪಾತ್ರವನ್ನು ವಿವರಿಸಲಾಗಿದೆ. ಈ ಮಾರ್ಗದರ್ಶಿಕೆಯಿಂದಾಗಿ ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರೆಗೆ ಎಲ್ಲರಿಗೂ ತಮ್ಮ ತಮ್ಮ ಜವಾಬ್ದಾರಿಗಳ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಸಿಗುತ್ತದೆ. ಈ ಮಾರ್ಗದರ್ಶಿಕೆಯನ್ನು ಉಪಯೋಗಿಸಿಕೊಂಡು ಎಲ್ಲಾ ಮಟ್ಟದಲ್ಲಿಯೂ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಹೆಚ್ಚು ವ್ಯವಸ್ಥಿತವಾಗಿ ಕೆಲಸ ಮಾಡಿ ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸಿ ಕೊರೊನಾದಿಂದ ರಾಜ್ಯ ಮುಕ್ತಿ ಪಡೆಯಲು ಸಹಾಯವಾಗಲಿದೆ ಎಂದರು. ಇದನ್ನೂ ಓದಿ: ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?
ಇದೇ ವೇಳೆ ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಓ ಎಂ.ಎಲ್.ವೈಶಾಲಿ, ಡಿ.ಎಸ್. ಜಯಲಕ್ಷ್ಮಿ, ಡಿಹೆಚ್ಓ ಡಾ. ರಾಜೇಶ್ ಸುರಗಿಹಳ್ಳಿ, ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ಸಿಇಓ ಬದ್ರೀಶ.ಬಿ.ಟಿ, ಇತರೆ ಅಧಿಕಾರಿಗಳು ಹಾಜರಿದ್ದರು.