– ವೀಡಿಯೋ ವೈರಲ್, ನಟಿ ವಿರುದ್ಧ ನೆಟ್ಟಿಗರ ಕಿಡಿ
ಮುಂಬೈ: ನಟಿ, ಗಾಯಕಿ ಜಸ್ಲೀನ್ ಮಾಥಾರೂ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕೆಲ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದೆ.
ವಧು ರೀತಿಯಲ್ಲಿ ಡ್ರೆಸ್ ಮಾಡಿಕೊಂಡ ನಟಿ ಲೆಹೆಂಗಾ ಬದಲು ಶಾರ್ಟ್ಸ್ ತೊಟ್ಟು ಪೋಸ್ ನೀಡಿರುವ ವೀಡಿಯೋವನ್ನ ಜಸ್ಲೀನ್ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಧುವಿನಂತೆ ರೆಡ್ ದುಪ್ಪಟಾ, ರೆಡ್ ಟಾಪ್, ಬಿಂದಿ, ಆಭರಣ ಧರಿಸಿರುವ ಜಸ್ಲೀನ್, ಲೆಹೆಂಗಾ ಬದಲು ತಿಳಿ ನೀಲಿ ಬಣ್ಣದ ಶಾರ್ಟ್ಸ್ ಧರಿಸಿ ಅತ್ತೆಯ ಮನೆಗೆ ಹೊರಟಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Advertisement
Advertisement
ಇದೀಗ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಚಾರಕ್ಕಾಗಿ ಭಾರತೀಯ ಸಂಸ್ಕ್ರತಿಗೆ ಧಕ್ಕೆಯುಂಟು ಮಾಡಿದ್ದೀರಿ. ಹಾಗಾಗಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕೆಂದು ಕೆಲ ನೆಟ್ಟಿಗರು ಆಗ್ರಹಿಸಿದ್ದಾರೆ. ಇನ್ನು ಹಲವರು ನಟಿಯ ವೀಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ.
Advertisement
View this post on Instagram
Advertisement
ಬಿಗ್ಬಾಸ್ ಸೀಸನ್ 12ರಲ್ಲಿ ಕಾಣಿಸಿಕೊಂಡಿದ್ದ ಜಸ್ಲೀನ್ ಹೆಚ್ಚು ಸದ್ದು ಮಾಡಿದ್ದರು. ಬಿಗ್ಬಾಸ್ ಮನೆಯಿಂದ ಹೊರ ಬಂದಾಗಿನಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಜಸ್ಲೀನ್ ವೃತ್ತಿ ಮತ್ತು ಖಾಸಗಿ ಜೀವನದ ಮಾಹಿತಿಯನ್ನ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ.