– ಸ್ಥಳದಲ್ಲಿ 8 ಸಾವು, ಒಟ್ಟು 15 ಮಂದಿ ದುರ್ಮರಣ
ಕಾಬೂಲ್: ಅಫ್ಘಾನಿಸ್ಥಾನದ ವಾಯು ಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15 ಜನರು ಮೃತಪಟ್ಟಿದ್ದಾರೆ.
Advertisement
ಮಂಗಳವಾರ ರಾತ್ರಿ ದಕ್ಷಿಣ ಹೆಲ್ಮಂದ್ ವ್ಯಾಪ್ತಿಯ ನವಾ ಜಿಲ್ಲೆಯಲ್ಲಿ ಅಫ್ಘಾನ್ ವಾಯುಸೇನೆ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿದೆ. ಒಂದು ಹೆಲಿಕಾಪ್ಟರ್ ನಲ್ಲಿ ಕಮಾಂಡೋಗಳನ್ನು ಒಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು. ಮತ್ತೊಂದರಲ್ಲಿ ಗಾಯಾಳುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲಿಯೇ ಎಂಟು ಜನ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ವಿಮಾನಗಳ ಮುಖಾಮುಖಿ ಡಿಕ್ಕಿ – ಓರ್ವ ಜನಪ್ರತಿನಿಧಿ ಸೇರಿ 7 ಜನ ಸಾವು
Advertisement
At least 15 people were killed after two Afghan air force helicopters collided in Nawa district of southern Helmand on Tuesday night: TOLO News #Afghanistan
— ANI (@ANI) October 14, 2020
Advertisement
ಇದುವರೆಗೂ ಅಫ್ಘಾನಿಸ್ಥಾನ ವಾಯುಸೇನೆ ಘಟನೆಯ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ. ಆದ್ರೆ ಸ್ಥಳೀಯ ಗವರ್ನರ್ ನವಾ ಜಿಲ್ಲೆಯಲ್ಲಿ ನಡೆದಿರುವ ಅಪಘಾತದ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 2 ಸೂರ್ಯಕಿರಣ್ ಯುದ್ಧವಿಮಾನಗಳು ಡಿಕ್ಕಿ