ಕೋಲ್ಕತ್ತಾ: ವಾರದ ಎರಡು ದಿನ ಸಂಪೂರ್ಣ ಲಾಕ್ಡೌನ್ ಮಾಡಿಕೊಳ್ಳಲು ಪಶ್ಚಿಮ ಬಂಗಾಳ ಸರ್ಕಾರ ಮುಂದಾಗಿದೆ. ಬಹುತೇಕ ರಾಜ್ಯಗಳು ಭಾನುವಾರ ಲಾಕ್ ಮಾಡಿಕೊಂಡಿದ್ರೆ ಪಶ್ಚಿಮ ಬಂಗಾಳ ಸರ್ಕಾರ ವಾರದ ಮಧ್ಯದ ಎರಡು ದಿನಗಳನ್ನು ಆಯ್ಕೆ ಮಾಡಿಕೊಂಡಿದೆ.
ಜುಲೈ 23 ಮತ್ತು 25 ಎರಡು ದಿನ ಪಶ್ಚಿಮ ಬಂಗಾಳ ಸಂಪೂರ್ಣವಾಗಿ ಲಾಕ್ಡೌನ್ ಆಗಲಿದೆ. ಈ ಎರಡು ದಿನ ಎಲ್ಲ ಸಾರಿಗೆ, ಕಚೇರಿ, ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಮುಂದಿನ ವಾರ ಜುಲೈ 29ರಂದು ಲಾಕ್ಡೌನ್ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.
Advertisement
Advertisement
ಕಂಟೈನ್ಮೆಂಟ್ ಝೋನ್ ಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿರಲಿವೆ. ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ ಎಂದು ಸರ್ಕಾರ ಹೇಳಿದೆ. ಈ ಹಿಂದೆ ಡೊಮೆಸ್ಟಿಕ್ ವಿಮಾನಗಳ ಹಾರಾಟವನ್ನು ನಿಷೇಧಿಸಬೇಕೆಂದು ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಇದುವರೆಗೂ ಪಶ್ಚಿಮ ಬಂಗಾಳದಲ್ಲಿ 42,487 ಕೊರೊನಾ ಪ್ರಕರಣಗಳು ದಾಖಲಾಗಿವೆ.
Advertisement