– ಮದುವೆ ಆಗೋದಾಗಿ ನಂಬಿಸಿ ಅನೇಕ ಬಾರಿ ರೇಪ್
– ಮೊದಲ ಬಾರಿ ಅತ್ಯಾಚಾರ ಮಾಡಿದಾಗ ವಿಡಿಯೋ ರೆಕಾರ್ಡ್
ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಕಾನ್ಸ್ಟೇಬಲ್ ಅನೇಕ ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಕಾನ್ಸ್ಟೇಬಲ್ನನ್ನು ರವೀಂದ್ರ ದಾಭಡೆ (32) ಎಂದು ಗುರುತಿಸಲಾಗಿದೆ. ಆರೋಪಿ ಕಾನ್ಸ್ಟೇಬಲ್ ಮದುವೆ ಆಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಮೊದಲ ಬಾರಿಗೆ ಅತ್ಯಾಚಾರ ಎಸಗಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.
Advertisement
Advertisement
ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಪೊಲೀಸರು ಈಗ ಕಾನ್ಸ್ಟೇಬಲ್ನನ್ನು ಬಂಧಿಸಿದ್ದಾರೆ. ಆಗಸ್ಟ್ 1 ರಂದು ಸಂತ್ರಸ್ತೆ ಪ್ರಕರಣ ದಾಖಲಿಸಿದ್ದಳು. ಆದರೆ ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಕಾರಣ ಕಾನ್ಸ್ಟೇಬಲ್ ಕ್ವಾರಂಟೈನ್ನಲ್ಲಿದ್ದನು. ಹೀಗಾಗಿ ಆರೋಪಿಯನ್ನು ಈಗ ಬಂಧಿಸಲಾಗಿದೆ.
Advertisement
ಸಂತ್ರಸ್ತೆ ಜೂನಿಯರ್ ಕಾಲೇಜಿನಲ್ಲಿದ್ದಾಗ ಕಾನ್ಸ್ಟೇಬಲ್ ರವೀಂದ್ರ ದಾಭಡೆ ಪರಿಚಯವಾಗಿದೆ. ನಂತರ ಆರೋಪಿ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಅತ್ಯಾಚಾರದ ವಿಡಿಯೋವನ್ನು ಸಂತ್ರಸ್ತೆಗೆ ಗೊತ್ತಿಲ್ಲದೇ ರೆಕಾರ್ಡ್ ಮಾಡಿಕೊಂಡಿದ್ದಾನೆ.
Advertisement
ಅತ್ಯಾಚಾರದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಅನೇಕ ಬಾರಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನನಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ಆಗಿತ್ತು. ಆದರೆ ಆರೋಪಿ ಕಾನ್ಸ್ಟೇಬಲ್ ಅತ್ಯಾಚಾರದ ವಿಡಿಯೋವನ್ನು ಆತನಿಗೆ ಸೆಂಡ್ ಮಾಡಿದ್ದಾನೆ. ಇದರಿಂದ ನನ್ನ ಮದುವೆ ಕೂಡ ಕ್ಯಾನ್ಸೆಲ್ ಆಗಿದೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.
ಸದ್ಯಕ್ಕೆ ಕಾನ್ಸ್ಟೇಬಲ್ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿಯಲ್ಲಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.