ಹಾಸನ: ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಜಿಲ್ಲೆಯ ಬೇಲೂರು ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಹಳೇಬೀಡು ಹೊಯ್ಸಳೇಶ್ವರ ದೇವಾಲಯದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಕತ್ತಲಲ್ಲೇ ದೇವರ ದರ್ಶನ ಮಾಡುವಂತಾಗಿದೆ.
6 ತಿಂಗಳಿಂದ ಸುಮಾರು 45,000 ರೂ. ವಿದ್ಯುತ್ ಬಿಲ್ಅನ್ನು ಪುರಾತತ್ವ ಇಲಾಖೆ ವಿಭಾಗ ಪಾವತಿಸಬೇಕಿದೆ. ಪ್ರತಿನಿತ್ಯ ದೇಗುಲಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ದೇವಾಲಯದ ಒಳಗೆ ಕತ್ತಲೆಯ ಇರುವ ಕಾರಣ ದೇಗುಲದ ಒಳಭಾಗದ ಶಿಲ್ಪಕಲೆಯನ್ನು ಸವಿಯಲಾಗದೆ ನಿರಾಶರಾಗುತ್ತಿದ್ದಾರೆ. ಸಾವಿರಾರು ಜನ ಭೇಟಿ ನೀಡುವ ದೇಗುಲದ ವಿದ್ಯುತ್ ಬಿಲ್ ಭರಿಸಲಾಗದ ಪುರಾತತ್ವ ಇಲಾಖೆ ವಿರುದ್ಧ ಪ್ರವಾಸಿಗರು ಬೇಸರ ಹೊರಹಾಕುತ್ತಿದ್ದಾರೆ.
Advertisement
Advertisement
ಮೂರು ತಿಂಗಳ ಹಿಂದೆ ವಿದ್ಯುತ್ ಬಿಲ್ ಪಾವತಿಸಿಲ್ಲ ಎಂದು ಸೆಸ್ಕ್ ಸಿಬ್ಬಂದಿ ದೇವಾಲಯದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ರು. ಈ ವೇಳೆ ವಿದ್ಯುತ್ ಬಾಕಿ ಪಾವತಿಸುವುದಾಗಿ ಪುರಾತತ್ವ ವಿಭಾಗದ ಅಧಿಕಾರಿಗಳು ಭರವಸೆ ನೀಡಿದ್ದರು. ಹೀಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಅಂದಿನಿಂದಲೂ ಬಿಲ್ ಬಾಕಿ ಇದ್ದು, ಈಗ ಮೊತ್ತವೂ ಹೆಚ್ಚಾಗಿರುವ ಕಾರಣ ನಿಯಮಾನುಸಾರ ಕನೆಕ್ಷನ್ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಇತಿಹಾಸ ಪ್ರಸಿದ್ಧ ದೇಗುಲದ ವಿದ್ಯುತ್ ಬಿಲ್ ಪಾವತಿಸುವಷ್ಟು ಹಣ ಸರ್ಕಾರದ ಬೊಕ್ಕಸದಲ್ಲಿ ಇಲ್ಲವೇ ಎಂದು ಪ್ರವಾಸಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.