ಬೆಂಗಳೂರು: ಅನಾರೋಗ್ಯದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡುಬಂದಿದೆ. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಬಹುತೇಕ ನಾಡಿದ್ದು ಸಿದ್ದರಾಮಯ್ಯ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ಮಾಯಕ್ಕೆ ಅಸಲಿ ಕಾರಣವೇನು ಗೊತ್ತಾ?
Advertisement
ಜೂನ್ 1ರಂದು ಜ್ವರ ಕಂಡುಬಂದ ಕಾರಣಕ್ಕೆ ಸಿದ್ದರಾಮಯ್ಯ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಅಗತ್ಯ ಕಂಡುಬಂದರೆ ವೈದ್ಯರ ಸೂಚನೆ ಅನುಸರಿಸಿ ದಾಖಲಾಗುವ ಬಗ್ಗೆ ಹೇಳಿದ್ದರು. ಆ ಬಳಿಕ, ಸಿದ್ದರಾಮಯ್ಯ ಅವರಿಗೆ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಬಂದಿತ್ತು. ಆದರೂ ವೈರಲ್ ಫಿವರ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಜತೆ ಆಸ್ಪತ್ರೆಯಲ್ಲಿ ಪುತ್ರ ಡಾ.ಯತೀಂದ್ರ ಸಹ ಇದ್ದಾರೆ.
Advertisement
Advertisement
ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೋವಿಡ್ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು.