ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಸಹಯೋಗದ ‘ಜ್ಞಾನದೀವಿಗೆ’ ಕಾರ್ಯಕ್ರಮದ ವತಿಯಿಂದ ವಿವಿಧ ಜಿಲ್ಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು.
ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್ ರಂಗನಾಥ್, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಗವರ್ನರ್ ಕೇಶವಮೂರ್ತಿ, ಆರೋಗ್ಯ ಸಚಿವ ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಬ್ಲಿಕ್ ಟಿವಿ ಸಿಇಒ ಅರುಣ್ ಕುಮಾರ್, ಸಿಒಒ ಸಿ.ಕೆ ಹರೀಶ್ ಮಕ್ಕಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿದರು. ಇದನ್ನೂ ಓದಿ: ಬೆಳಕಿನ ಹಬ್ಬದ ಸಂದರ್ಭದಲ್ಲಿ ಮಕ್ಕಳ ಬಾಳಿಗೆ ಬೆಳಕು ನೀಡ್ತಿದ್ದೀರಿ: ಸಿದ್ದಗಂಗಾ ಸ್ವಾಮೀಜಿ
Advertisement
Advertisement
ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ಮಕ್ಕಳಿಗೆ ಅನುಕೂಲವಾಗುವಂತೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ‘ಜ್ಞಾನದೀವಿಗೆ’ ಕಾರ್ಯಕ್ರಮಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ. ಪಬ್ಲಿಕ್ ಟಿವಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಗವರ್ನರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ರಂಗನಾಥ್ ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ: ಸಿಎಂ
Advertisement
ಇಂದು ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಟ್ಯಾಬ್ ವಿತರಿಸುವ 'ಜ್ಞಾನದೀವಿಗೆ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಚಿಕ್ಕಬಳ್ಳಾಪುರ ಜಿಲ್ಲೆಯ 7,500 ಮಕ್ಕಳಿಗೆ ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ಯಾಬ್ ವಿತರಿಸುವ ಮೂಲಕ ನಾನೂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿರ್ಧರಿಸಿದ್ದೇನೆ. pic.twitter.com/HTcCEz7Huj
— Dr Sudhakar K (@mla_sudhakar) November 8, 2020
Advertisement
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶುಭಹಾರೈಸಿ, ರಂಗನಾಥ್ ಅವರು ಬಹಳಷ್ಟು ಚಿಂತನೆ ಮಾಡಿಯೇ ಈ ಮಹಾನ್ ಕಾರ್ಯಕ್ಕೆ ಕೈ ಹಾಕಿದ್ದಾರೆ. ಇದೊಂದು ಸ್ವಾಗತಾರ್ಹ ಸಂಗತಿ. ಸರ್ಕಾರ ನಿಮ್ಮ ಜೊತೆ ಇದೆ. ಎಲ್ಲಾ ರೀತಿಯ ಸಹಕಾರ ಸರ್ಕಾರದಿಂದ ಸಿಗಲಿದೆ. ಎಲ್ಲರೂ ಒಟ್ಟಿಗೆ ಸೇರಿ ಕಾರ್ಯರೂಪಕ್ಕೆ ತರುವ ಈ ಕಾರ್ಯದಲ್ಲಿ ತಾವು ಕೈ ಜೋಡಿಸುವುದಾಗಿ ತಿಳಿಸಿದರು. ಅಲ್ಲದೆ ಈ ಕುರಿತು ಹೆಚ್. ಆರ್ ರಂಗನಾಥ್ ಜೊತೆ ಶೀಘ್ರವೇ ಚರ್ಚೆ ನಡೆಸುವುದಾಗಿ ತಿಳಿಸಿದ ಸಿಎಂ, ಕಾರ್ಯಕ್ರಮಕ್ಕೆ ಅಪಾರ ಮೆಚ್ಚುಗೆಯನ್ನು ಸೂಚಿಸಿದರು. ಇದನ್ನೂ ಓದಿ: ‘ಜ್ಞಾನದೀವಿಗೆ’ ಕಾರ್ಯಕ್ರಮಕ್ಕೆ ಚಾಲನೆ